ಮಹಿಳೆಯರು ಆರ್ಥಿಕ ಸಬಲರಾಗಬೇಕು: ಪ್ರತಿಭಾ ಸಲಹೆ

KannadaprabhaNewsNetwork |  
Published : May 15, 2026, 01:45 AM IST
ಸೂಲಿಬೆಲೆ ಸಮೀಪದ ಲಕ್ಕೊಂಡಹಳ್ಳಿ ಗ್ರಾಮದಲ್ಲಿ ನೆಡೆದ ಮಹಿಳಾ ಕ್ರೀಡಾಕೂಟವನ್ನು  ಶಾಸಕ ಶರತ್ ಬಚ್ಚೇಗೌಡ ಪತ್ನಿ ಪ್ರತಿಭಾಶರತ್ ಬಚ್ಚೇಗೌಡ ಉದ್ಘಾಟಿಸಿದರು, ಟಿಎಪಿಸಿಎಂಎಸ್ ನಿರ್ದೇಶಕಿ ಪಾರ್ವತಮ್ಮ, ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ಭಾರತಿದೇವರಾಜ್, ಇತರರು ಇದ್ದರು. | Kannada Prabha

ಸಾರಾಂಶ

ಸೂಲಿಬೆಲೆ: ಮಹಿಳೆಯರು ಸಾಮಾಜಿಕ, ಆರ್ಥಿಕ, ರಾಜಕೀಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಸಬಲರಾಗಬೇಕು ಎಂದು ಟೀಮ್ ಎಸ್‌ಬಿಜಿ ಸಂಸ್ಥಾಪಕಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು

ಸೂಲಿಬೆಲೆ: ಮಹಿಳೆಯರು ಸಾಮಾಜಿಕ, ಆರ್ಥಿಕ, ರಾಜಕೀಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಸಬಲರಾಗಬೇಕು ಎಂದು ಟೀಮ್ ಎಸ್‌ಬಿಜಿ ಸಂಸ್ಥಾಪಕಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಸೂಲಿಬೆಲೆ ಸಮೀಪದ ಲಕ್ಕೊಂಡಹಳ್ಳಿ ಗ್ರಾಪಂನಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡುವ ಸಾಕ್ಷರರಾಗಿ ತಮ್ಮ ಹಕ್ಕುಗಳ ಚಲಾವಣೆಗೆ ಮುಂದಾಗಬೇಕು. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರು ಭಾವನಾತ್ಮಕ ಬಾಂಧವ್ಯ ಹೊಂದಿದ್ದು ಒಂದು ದಿನವು ವಿಶ್ರಾಂತಿ ಪಡೆಯದೇ ಕ್ಷೇತ್ರದಲ್ಲಿಯೇ ಸೇವಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿ ಮಂತ್ರ ನಮ್ಮ ಕರ್ತವ್ಯವಾಗಿ ಸ್ವೀಕರಿಸಿದ್ದೇವೆ ಎಂದರು.

ಗ್ರಾಪಂ ವ್ಯಾಪ್ತಿಯ ಮಹಿಳೆಯರು ಕ್ರೀಡಾಕೂಟದಲ್ಲಿ ಸ್ವಯಂ ಪ್ರೇರಿತರಾಗಿ ರಂಗೋಲಿ, ಹಗ್ಗಜಗ್ಗಾಟ, ಲೆಮನ್ ಅಂಡ್ ಸ್ಪೂನ್, ಮ್ಯೂಜಿಕಲ್ ಚೇರ್, ಬಕೆಟ್ ಬಾಲ್, ೧೦೦ ಮೀಟರ್ ಓಟ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಪ್ರಥಮ ಬಹುಮಾನ ೫ ಸಾವಿರ, ದ್ವಿತೀಯ ಬಹುಮಾನ ೩ ಸಾವಿರ, ತೃತೀಯ ಬಹುಮಾನ ೨ ಸಾವಿರ ಹಾಗೂ ಪಾಲ್ಗೊಂಡ ಎಲ್ಲರಿಗೂ ಸಮಾಧಾನಕರ ಬಹುಮಾನವನ್ನು ಪ್ರತಿಭಾ ಶರತ್ ಬಚ್ಚೇಗೌಡ ವಿತರಣೆ ಮಾಡಿದರು.

ಈ ವೇಳೆ ಟಿಎಪಿಸಿಎಂಎಸ್ ನಿರ್ದೇಶಕಿ ಬೇಗೂರು ಪಾರ್ವತಮ್ಮ, ಗ್ರಾಪಂ ಅಧ್ಯಕ್ಷೆ ಪದ್ಮಾವತಿ, ಮಂಜುನಾಥ್, ಮಾಜಿ ಅಧ್ಯಕ್ಷೆ ಭಾರತಿ, ಉಪಾಧ್ಯಕ್ಷೆ ಮುನಿಯಮ್ಮ, ಗೀತಾ, ಪದ್ಮಾವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶಿವಮ್ಮ, ಗ್ರಾಪಂ ಸದಸ್ಯೆ ಮಂಜುಳಾ, ಅಶ್ವಿನಿ, ಮಾಜಿ ಅಧ್ಯಕ್ಷ ರಾಧಾಕೃಷ್ಣ, ಬೈರೇಗೌಡ, ಆನಂದ್, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಹೇಮಣ್ಣ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲೆ ಮುಚ್ಚುವ ಪ್ರಕ್ರಿಯೆ ವಿರೋಧಿಸಿ ಪ್ರತಿಭಟನೆ
ಸಾಂಸ್ಕೃತಿಕ ಮೌಲ್ಯದೊಂದಿಗೆ ಇನ್ಫೋಸಿಸ್‌ ಕಾರ್ಯನಿರ್ವಹಣೆ