ಹೊಸಕೋಟೆ: ಮಹಿಳೆಯರು ಕಾಲಕಾಲಕ್ಕೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಈಸ್ಟ್ ಪಾಯಿಂಟ್ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರೇಮ್ ತಿಳಿಸಿದರು.
ಡಾ.ರತಿಪ್ರಿಯ ಮಾತನಾಡಿ, ಗ್ರಾಮೀಣ ಮಹಿಳೆಯರು ಸಂಕೋಚ ಮತ್ತು ಮೂಢನಂಬಿಕೆಗಳಿಂದಾಗಿ ಸ್ತನ ಕ್ಯಾನ್ಸರ್ ಮತ್ತು ಇನ್ನಿತರ ಲೈಂಗಿಕ ರೋಗಗಳ ಬಗ್ಗೆ ವೈದ್ಯರಿಗೆ ಮಾಹಿತಿ ನೀಡದೆ ರೋಗ ಉಲ್ಬಣಗೊಂಡು ಅಂತಿಮ ಹಂತದಲ್ಲಿ ಚಿಕಿತ್ಸೆಗೆ ಬಂದಾಗ ಸಾವನಪ್ಪಿರುವ ಘಟನೆಗಳು ಆಗಿವೆ. ಇಂತಹ ಶಿಬಿರಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಅಲ್ಲದೆ ನಿಯಮಿತವಾಗಿ ರಕ್ತದೊತ್ತಡ, ಮಧುಮೇಹ ಕಣ್ಣಿನ ತಪಾಸಣೆಯನ್ನು ಮಾಡಿಸಿ ಆರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಹರೀಶ್ ಕುಮಾರ್, ಜ್ಞಾನವಿಕಾಸ ವಿಭಾಗದ ಪ್ರಾದೇಶಿಕ ಯೋಜನಾಧಿಕಾರಿ ಸಂಧ್ಯಾ, ಈಸ್ಟ್ ಪಾಯಿಂಟ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ನರೇಂದ್ರ ಪಿ.ದತ್ತಿ, ಒಬಿಜಿ ಮುಖ್ಯಸ್ಥ ಶ್ರೀನಿವಾಸ್, ಪೀಲ್ಡ್ ಆಫೀಸರ್ ರವಿ, ಆಸ್ಪತ್ರೆಯ ಇತರ ಸಿಬ್ಬಂದಿ ಮತ್ತು ಜ್ಞಾನವಿಕಾಸ ಸಮನ್ವಯ ಅಧಿಕಾರಿ ವಿಘ್ನೇಶ್ವರ, ಕೇಂದ್ರದ ಸದಸ್ಯರು ಭಾಗವಹಿಸಿದ್ದರು.ಪೋಟೋ: 5 ಹೆಚ್‌ಎಸ್‌ಕೆ 3
ಹೊಸಕೋಟೆಯ ಮಾರಸಂಡಹಳ್ಳಿಯಲ್ಲಿ ಹಮ್ಮಿಕೊಂಡ ಸ್ತ್ರೀರೋಗ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು.