ಕಾನೂನುಗಳ ಬಗ್ಗೆ ಮಹಿಳೆಯರು ತಿಳಿದುಕೊಳ್ಳಲಿ

KannadaprabhaNewsNetwork |  
Published : Mar 25, 2026, 02:15 AM IST
೨೩ಕೆಪಿಎಲ್೦೪  ಅಧಿವಕ್ತ ಪರಿಷತ್ ಕೊಪ್ಪಳ ಜಿಲ್ಲಾ ಘಟಕ, ಶ್ರೀ ಚೈತನ್ಯ ಗ್ರೂಪ್ ಆಫ್ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ಲಯನ್ಸ್ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿತು | Kannada Prabha

ಸಾರಾಂಶ

ಮಹಿಳಾ ದೌರ್ಜನ್ಯಗಳನ್ನು ತಡೆಗಟ್ಟಲು ಸರಕಾರ ಮತ್ತು ನ್ಯಾಯಾಂಗ ಇಲಾಖೆ ವಿಶೇಷ ಕಾಯ್ದೆಗಳನ್ನು ಜಾರಿಗೊಳಿಸಿದೆ

ಕೊಪ್ಪಳ: ಮಹಿಯರ ರಕ್ಷಣೆಗೆ ಹಲವು ಕಾನೂನುಗಳು ಇವೆ. ಇಂತಹ ಕಾನೂನುಗಳ ಬಗ್ಗೆ ಹೆಚ್ಚು ಅರಿತುಕೊಳ್ಳಬೇಕು ಎಂದು ಅಧಿವಕ್ತ ಪರಿಷತ್ತಿನ ಕರ್ನಾಟಕ ಉತ್ತರ ಭಾಗದ ರಾಜ್ಯಾಧ್ಯಕ್ಷ ಹಿರಿಯ ನ್ಯಾಯವಾದಿ ಸಿ.ಎಫ್. ಕುದರಿಮೋತಿ ಸಲಹೆ ನೀಡಿದರು.

ಅಧಿವಕ್ತ ಪರಿಷತ್ ಕೊಪ್ಪಳ ಜಿಲ್ಲಾ ಘಟಕ, ಶ್ರೀ ಚೈತನ್ಯ ಗ್ರೂಪ್ ಆಫ್ ಕಾಲೇಜ್ ಸಂಯುಕ್ತಾಶ್ರಯದಲ್ಲಿ ನಗರದ ಲಯನ್ಸ್ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಪಾದಾರ್ಪಣೆ ಮಾಡುತ್ತಿದ್ದಾರೆ. ಮಹಿಳಾ ದೌರ್ಜನ್ಯಗಳನ್ನು ತಡೆಗಟ್ಟಲು ಸರಕಾರ ಮತ್ತು ನ್ಯಾಯಾಂಗ ಇಲಾಖೆ ವಿಶೇಷ ಕಾಯ್ದೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.

ಅಧಿವಕ್ತ ಪರಿಷತ್ತಿನ ಕೊಪ್ಪಳ ಜಿಲ್ಲಾಧ್ಯಕ್ಷ ನ್ಯಾಯವಾದಿ ಮಂಜುನಾಥ ಎಚ್.ಎಂ. ಮಾತನಾಡಿ, ಮಹಿಳೆಯರಿಗೆ ನೀಡಲಾದ ಕಾನೂನಿನ ಹಕ್ಕುಗಳು ಮತ್ತು ರಕ್ಷಣೆ ಕುರಿತಾದ ಕಾಯ್ದೆಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಅಧಿವಕ್ತ ಪರಿಷತ್‌ ಕುರಿತು ಮತ್ತು ಜಿಲ್ಲಾ ಘಟಕದಿಂದ ಕೈಗೊಂಡ ಕಾರ್ಯಕ್ರಮಗಳ ಕುರಿತು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಶ್ರೀ ಚೈತನ್ಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸತೀಶ್ಅ ಧ್ಯಕ್ಷತೆ ವಹಿಸಿದ್ದರು. ಅಧಿವಕ್ತ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷ ಎಸ್.ಬಿ. ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಶರಣು ಸಾವರ್ಕರ್ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುಸ್ತಕಗಳು ಸಂಸ್ಕೃತಿ ಜೀವಾಳ
ಹಾವೇರಿ ಜಿಲ್ಲೆಯ ವಿವಿಧೆಡೆ ಆಲಿಕಲ್ಲು, ಗಾಳಿ ಸಹಿತ ಸುರಿದ ಮಳೆ