ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾಡಳಿತ, ಜಿಪಂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಮತ್ತು ಆಂತರಿಕ ದೂರು ನಿವಾರಣೆ ಸಮಿತಿ ಅಧ್ಯಕ್ಷರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹಿಳೆಯರು ಕೆಲಸದ ಸ್ಥಳದಲ್ಲಿ ಯಾವುದೇ ರೀತಿಯ ದೌರ್ಜನ್ಯ, ಕಿರುಕುಳ ಅಥವಾ ಅನ್ಯಾಯ ಸಹಿಸಿಕೊಂಡು ಮೌನವಾಗಿರಬಾರದು. ಸಮಸ್ಯೆ ಎದುರಾದ ಸಂದರ್ಭದಲ್ಲಿ ಕಾಯ್ದೆಯಡಿ ರಚಿಸಲಾಗಿರುವ ಆಂತರಿಕ ದೂರು ಸಮಿತಿಗೆ ದೂರು ಸಲ್ಲಿಸಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಗೌರವ ಕಾಪಾಡುವ ದೃಷ್ಟಿಯಿಂದ ಸ್ಥಳೀಯ ಹಾಗೂ ಆಂತರಿಕ ದೂರು ನಿವಾರಣೆ ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಪಾಶ್ (ಪಿಒಎಸ್‌ಎಚ್) ಕಾಯ್ದೆಯ ಉದ್ದೇಶ, ನಿಯಮಗಳು ಹಾಗೂ ಆಂತರಿಕ ದೂರು ಸಮಿತಿಯ ಪ್ರಮುಖ ಕರ್ತವ್ಯಗಳ ಕುರಿತು ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಸಮಗ್ರ ಅರಿವು ಹೊಂದಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಕಾಯ್ದೆಯ ಅರಿವು ಅತ್ಯಂತ ಮಹತ್ವದ್ದಾಗಿದೆ. ಮಹಿಳೆಯರು ಯಾವುದೇ ರೀತಿಯ ಅನ್ಯಾಯಕ್ಕೆ ಒಳಗಾದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮೂಲಕ ಲಭ್ಯವಿರುವ ಉಚಿತ ಕಾನೂನು ಸೇವೆ ಪಡೆದುಕೊಳ್ಳಬೇಕು. ನೊಂದ ಮಹಿಳೆಯರು ತಮ್ಮ ಸಮಸ್ಯೆಗಳಿಗೆ ಕಾನೂನು ಪರಿಹಾರ ಪಡೆಯಲು ಈ ಸೌಲಭ್ಯಸದುಪಯೋಗಪಡಿಸಿಕೊಳ್ಳಬೇಕು ಎಂದ ಅವರು, ಮಹಿಳೆಯರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಉಚಿತ ಕಾನೂನು ಸೇವೆ ಹಾಗೂ ಅಗತ್ಯ ಕಾನೂನು ನೆರವು ನೀಡಲಾಗುತ್ತಿದೆ. ನೊಂದ ಮಹಿಳೆಯರು ಯಾವುದೇ ಹಿಂಜರಿಕೆಯಿಲ್ಲದೆ ಕಾನೂನು ಸೇವಾ ಪ್ರಾಧಿಕಾರ ಸಂಪರ್ಕಿಸಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.ತರಬೇತಿದಾರ ಪ್ರಕಾಶ ಅವರು ಪಿಪಿಟಿ ಮೂಲಕ ಪಾಶ್ ಕಾಯ್ದೆಯ ವಿವಿಧ ಅಂಶಗಳು, ಕಾಯ್ದೆಯಡಿ ರಚಿಸಲಾಗಿರುವ ಆಂತರಿಕ ದೂರು ಸಮಿತಿಯ ಜವಾಬ್ದಾರಿಗಳು, ದೂರು ಸ್ವೀಕರಿಸುವ ಹಾಗೂ ಪರಿಹರಿಸುವ ವಿಧಾನ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿವರವಾದ ಮಾಹಿತಿ ನೀಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ.ಆರ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ.ಸಂತೋಷಕುಮಾರ.ಎಚ್. ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮ ಬಳಿಕ ಡಾ.ನಾಗಲಕ್ಷ್ಮೀ ಚೌಧರಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನದಲ್ಲಿರುವ ಜಿಲ್ಲಾ ಶಿಶುಪಾಲನಾ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮಕ್ಕಳ ಪಾಲನೆ, ಆರೈಕೆ ಹಾಗೂ ಅವರಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಮಕ್ಕಳಿಗೆ ಅಗತ್ಯವಿರುವ ಆರೈಕೆ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.