ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಮಹಿಳೆಯರಿಗೆ ಮೀಸಲಾತಿ ಜಾರಿ ಹಾಗೂ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾವಂತರಾಗುತ್ತಿದ್ದಾರೆ. ಇದರ ಪರಿಣಾಮ ಅವರಿಗೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತಿದೆ. ಮನೆ ಹಾಗೂ ಹೊರಗಡೆಯೂ ಮಹಿಳೆ ಹೆಚ್ಚು ದುಡಿಯುತ್ತಿರುವ ಕಾರಣದಿಂದ ತಮ್ಮ ವೈಯಕ್ತಿಕ ಆರೋಗ್ಯ ಕಡೆ ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಇದನ್ನು ನಿರ್ಲಕ್ಷ್ಯ ಮಾಡದೇ ಪ್ರತಿಯೊಬ್ಬರೂ ತಮ್ಮ ಆರೋಗ್ಯ ಕಡೆ ನಿಗಾ ವಹಿಸಬೇಕು. ಸಣ್ಣ ಪುಟ್ಟ ಸಮಸ್ಯೆಗಳು ಕಾಣಿಸಿಕೊಂಡ ತಕ್ಷಣ ವೈದ್ಯರ ಸಲಹೆ, ಮಾರ್ಗದರ್ಶನ ಪಡೆದುಕೊಳ್ಳುವುದು ಒಳಿತು ಎಂದು ಸಲಹೆ ನೀಡಿದರು.
ವಿಶೇಷವಾಗಿ ಮಹಿಳೆಯರು ೪೦ ವರ್ಷ ದಾಟುತ್ತಿದ್ದಂತೆ ಅನೇಕ ಸಮಸ್ಯೆಗಳು ಬರುತ್ತಿವೆ. ಪ್ರಮುಖವಾಗಿ ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ತಾವೆಲ್ಲರೂ ಆಗಿದ್ದಾಂಗ್ಗೆ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರ ಕ್ಯಾನ್ಸರ್ ತಡೆಯುವ ಸಲುವಾಗಿ ಉಚಿತವಾಗಿ ಹೆಣ್ಣು ಮಕ್ಕಳಿಗೆ ಲಸಿಕೆ ಹಾಕುತ್ತಿದೆ. ಇದನ್ನು ತಪ್ಪದೇ ಮಕ್ಕಳಿಗೆ ಹಾಕಿಸಿ, ಇದರಿಂದ ಕ್ಯಾನ್ಸರ್ ತಡೆಯಲು ಸಾಧ್ಯವಿದೆ. ವೈದ್ಯೆಯಾಗಿ ನಾನು ಸಹ ನಮ್ಮ ಮಕ್ಕಳಿಗೆ ಈ ಲಸಿಕೆ ಹಾಕಿಸಿದ್ದೇನೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದರು.ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಬಹಳಷ್ಟು ಗಮನಾರ್ಹ ಬದಲಾವಣೆ ಮಾಡಿದೆ. ಮಹಿಳೆಯರ ಸ್ವಾವಲಂಬನೆ ಬದುಕಿಗಾಗಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ಜೊತೆಗೆ ಮಹಿಳೆಯರ ಸಬಲೀಕರಣಕ್ಕಾಗಿ ಕೌಶಲ್ಯ ತರಬೇತಿ ನೀಡಿ, ಸ್ವಂತ ಉದ್ಯೋಗವನ್ನು ಹೊಂದಲು ಸಹಕಾರ ನೀಡಿದೆ ಎಂದರು.
ಮಹಿಳಾ ಮೋರ್ಚಾ ಅಧ್ಯಕ್ಷೆ ಮಲೆಯೂರು ಕಮಲಮ್ಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿ ವರ್ಷವೂ ವಿಶ್ವ ಮಹಿಳಾ ದಿನವನ್ನು ಆಚರಣೆ ಮಾಡುವ ಜೊತೆಗೆ ಸಾಧಕ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ. ಈ ಬಾರಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಡಾ. ಶ್ವೇತಾ ಶಶಿಧರ್, ರೈಫಲ್ ಶ್ಯೂಟಿಂಗ್ ನಲ್ಲಿ ಪ್ರಶಸ್ತಿ ಪಡೆದಿರುವ ಸತ್ಯಭಾಮ ಅವರನ್ನು ಸನ್ಮಾನಿಸಲಾಗುತ್ತದೆ. ಇಂಥ ಸಾಧಕರ ಪರಿಚಯವನ್ನು ಮಾಡುವ ಜೊತೆಗೆ ಮಹಿಳೆಯರನ್ನು ಸಂಘಟಿಸಲು ಶ್ರಮಿಸಲಾಗುತ್ತಿದೆ ಎಂದರು.