ಮಹಿಳೆಯರು ಕುಟುಂಬದ ಜೊತೆಗೆ ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು: ಮೀರಾ ಶಿವಲಿಂಗಯ್ಯ

KannadaprabhaNewsNetwork |  
Published : Nov 18, 2026, 01:45 AM IST
16ಕೆಎಂಎನ್ ಡಿ26 | Kannada Prabha

ಸಾರಾಂಶ

ಮಹಿಳೆಯರ ಕೌಶಲ್ಯ ವೃದ್ಧಿಗೆ ಹಾಗೂ ಅವರಲ್ಲಿನ ಸುಪ್ತ ಪ್ರತಿಭೆಯನ್ನು ಹೊರತರಲು ವಿವಿಧ ಚಟುವಟಿಕೆಗಳು ಸಹಕಾರಿಯಾಗಿವೆ. ಮಹಿಳೆಯರು ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವ ಜೊತೆಗೆ ತಮ್ಮಆರೋಗ್ಯ, ಶಿಕ್ಷಣ ಮತ್ತು ವೈಯಕ್ತಿಕ ಬೆಳವಣಿಗೆಗೂ ಆದ್ಯತೆ ನೀಡಬೇಕು

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಕುಟುಂಬದ ಜವಾಬ್ದಾರಿಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರು ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ತಿಳಿಸಿದರು.

ವೀರಶೈವ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನವಿಕಾಸ ಕಾರ್ಯಕ್ರಮದಡಿ ಆಯೋಜಿಸಿದ್ದ ಮಹಿಳಾ ಸಮಾವೇಶ ಹಾಗೂ ಮಹಿಳಾ ವಿಚಾರಗೋಷ್ಠಿಯಲ್ಲಿ ಮಾತನಾಡಿ, ಮಹಿಳೆಯರು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಆರೋಗ್ಯವು ಮುಖ್ಯವಾಗಿದೆ. ಉತ್ತಮ ಆರೋಗ್ಯವಿದ್ದರೆ ಸಾಧನೆ ಮಾಡಲು ಸಾಧ್ಯ ಎಂದರು.

ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಲ್ಲಿ ಆತ್ಮವಿಶ್ವಾಸ, ಸ್ವಾವಲಂಬನೆ ಹಾಗೂ ಸಾಮಾಜಿಕ ಅರಿವು ಮೂಡುತ್ತಿರುವುದು ಸಂತಸದ ಸಂಗತಿ. ಈಯೋಜನೆ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ತಮ್ಮ ಆಸಕ್ತಿ ಮತ್ತು ಸೃಜನಶೀಲತೆಯಿಂದ ಹೂಗುಚ್ಛ ತಯಾರಿಕೆ, ಆರತಿತಟ್ಟೆ ಅಲಂಕಾರ ಸೇರಿದಂತೆ ವಿವಿಧಕಲಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಮಹಿಳೆಯರಲ್ಲಿರುವ ಪ್ರತಿಭೆಗೆ ಸಾಕ್ಷಿಯಾಗಿದೆ ಎಂದರು.

ಮಹಿಳೆಯರ ಕೌಶಲ್ಯ ವೃದ್ಧಿಗೆ ಹಾಗೂ ಅವರಲ್ಲಿನ ಸುಪ್ತ ಪ್ರತಿಭೆಯನ್ನು ಹೊರತರಲು ಇಂತಹ ಚಟುವಟಿಕೆಗಳು ಸಹಕಾರಿಯಾಗಿವೆ. ಮಹಿಳೆಯರು ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವ ಜೊತೆಗೆ ತಮ್ಮಆರೋಗ್ಯ, ಶಿಕ್ಷಣ ಮತ್ತು ವೈಯಕ್ತಿಕ ಬೆಳವಣಿಗೆಗೂ ಆದ್ಯತೆ ನೀಡಬೇಕು ಎಂದರು.

ಕುಟುಂಬದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಹೊಂದಾಣಿಕೆ ಇದ್ದಾಗ ಮಾತ್ರ ಉತ್ತಮ ಕೌಟುಂಬಿಕ ವಾತಾವರಣ ನಿರ್ಮಾಣವಾಗುತ್ತದೆ. ಜ್ಞಾನವಿಕಾಸ ಕಾರ್ಯಕ್ರಮ ಇದೇರೀತಿಯಲ್ಲಿ ಮಹಿಳೆಯರ ಬದುಕಿನಲ್ಲಿ ಹೊಸ ಬದಲಾವಣೆತರಲಿ ಎಂದುಆಶಯ ವ್ಯಕ್ತಪಡಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈಸೂರು ಪ್ರಾದೇಶಿಕ ನಿರ್ದೇಶಕ ಎ.ಯೋಗೀಶ್ ಮಾತನಾಡಿ, ಮಹಿಳೆಯರ ಜ್ಞಾನ, ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆ ಹೆಚ್ಚಿಸುವ ಉದ್ದೇಶದಿಂದ ಪೂಜ್ಯ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಯೋಜನೆಯಿಂದ ನೀಡಲಾಗುವ ಸುಜ್ಞಾನನಿಧಿ ಶಿಷ್ಯ ವೇತನದ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಸ್ವಾಸ್ಥ್ಯಕುಟುಂಬ ನಿರ್ವಹಣೆ ಮತ್ತುಕೌಟುಂಬಿಕ ಸಾಮರಸ್ಯದಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯ ಕುರಿತು ಭಾರತೀ ಕಾಲೇಜು ಉಪನ್ಯಾಸಕಿ ಲಲಿತಕುಮಾರಿ ವಿಚಾರಗೋಷ್ಠಿ ನಡೆಸಿಕೊಟ್ಟರು.

ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕೆ.ಶೆಟ್ಟಿಹಳ್ಳಿ ಮಹಾದೇವಯ್ಯರಿಗೆ ವೀಲ್‌ಚೇರ್ ವಿತರಿಸಲಾಯಿತು. ಕೌಟುಂಬಿಕ ಸಾಮರಸ್ಯದಲ್ಲಿ ಮಹಿಳೆಯರ ಪಾತ್ರದ ಕುರಿತು ವಿಚಾರಗೋಷ್ಠಿ ಜರುಗಿತು. ಕಾರ್ಯಕ್ರಮದಲ್ಲಿ ತಾವೂಕು ಯೋಜನಾಧಿಕಾರಿ ಮಂಜುನಾಥ್, ಧರಣಿ ಪುಟ್ಟೇಗೌಡ, ಮೇಲ್ವಿಚಾರಕರಾದ ಮುನೇಶ್, ಹನುಮಂತರಾಯ, ಅಶ್ವಿನಿರಾಜ್, ಜ್ಯೋತಿ, ಸುಮಾ, ಭಾರತೀ, ಮಧು, ವಿಜಯಲಕ್ಷ್ಮಿ, ಶೇಖರ್ ಸೇರಿದಂತೆ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಪ್ರತಿಭೆ ಅನಾವರಣಕ್ಕೆ ಕಲಾಶ್ರೀ ಉತ್ತಮ ವೇದಿಕೆ: ಜಿಪಂ ಸಿಇಒ
ತೋಂಟದ ಸಿದ್ಧಲಿಂಗ ಶ್ರೀಗೆ ಮಕ್ಕಳ ಬಗ್ಗೆ ಅಪಾರ ಕಾಳಜಿ ಇತ್ತು: ಈಶಣ್ಣ ಬೆಟಗೇರಿ