ಮೇ 3ರಂದು ಮುರುಡೇಶ್ವರದಲ್ಲಿ ಮಹಿಳಾ ಸಮಾವೇಶ

KannadaprabhaNewsNetwork |  
Published : Apr 27, 2025, 01:52 AM IST
ಫೋಠೊ ಪೈಲ್ : 25ಬಿಕೆಲ್1 | Kannada Prabha

ಸಾರಾಂಶ

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದಡಿ ಮೇ ೩ರಂದು ಮುರುಡೇಶ್ವರದ ಜನತಾ ವಿದ್ಯಾಲಯದಲ್ಲಿ ಮಹಿಳಾ ಸಮಾವೇಶ ನಡೆಯಲಿದೆ

ಭಟ್ಕಳ: ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದಡಿ ಮೇ ೩ರಂದು ಮುರುಡೇಶ್ವರದ ಜನತಾ ವಿದ್ಯಾಲಯದಲ್ಲಿ ಮಹಿಳಾ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ನೇತ್ರಾವತಿ ಶ್ಯಾನಭಾಗ ಹೇಳಿದರು.ಅವರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿರುವ ನಾಗಯಕ್ಷೆ ಸಭಾಭವನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಬಂದು ಪುರುಷರಿಗೆ ಸರಿ ಸಮನಾಗಿ ನಿಲ್ಲುವ ಉದ್ದೇಶದೊಂದಿಗೆ ಮಹಿಳಾ ಸಂಘ ಮಾಡಿಕೊಂಡಿದ್ದೇವೆ. ಮುರುಡೇಶ್ವರದ ಜನತಾ ವಿದ್ಯಾಲಯದಲ್ಲಿ ಮಾ.3ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯ ತನಕ ಈ ಮಹಿಳಾ ಸಮಾವೇಶ ನಡೆಯಲಿದೆ. ಈ ಮಹಿಳಾ ಸಮಾವೇಶದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಮಹಿಳೆಯರಿಗೆ "ಮಹಿಳಾ ಸಮ್ಮಾನ ಕಾಯಕ್ರಮ " ಮಹಿಳಾ ಸಂತೆ, ಕಾರ್ಯಾಗಾರ, ವಸ್ತುಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಮಧ್ಯಾಹ್ನ ೧ ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು. ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕ ಸಚಿವರಾದ ಮಂಕಾಳ ವೈದ್ಯ ಉದ್ಘಾಟಿಸಲಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ, ರಾಜ್ಯ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕರ್ನಾಟಕ ರಾಜ್ಯ ಮಾರ್ಕೇಟಿಂಗ ಕನ್ಸಲ್ಟೆಂಟ್ ಅಧ್ಯಕ್ಷರಾದ ಸತೀಶ ಸೈಲ್ ಗೌರವ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ರಾಜ್ಯ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಶನ ಗೌಡ ವಹಿಸಲಿದ್ದಾರೆ.

ಸರ್ಕಾರಿ ಆಸ್ಪತ್ರತೆಯ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್, ಜಯಶ್ರೀ ಎಂ. ನಾಯ್ಕ, ರಜನಿ ದೇವಾಡಿಗ, ಶೋಭಾ ನಾಯ್ಕ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌