ಮಹಿಳಾ ವಾದಕ್ಕೆ ಭಾರತ ತವರೂರು: ಬಿ.ಎಂ ರೋಹಿಣಿ

KannadaprabhaNewsNetwork |  
Published : Mar 12, 2026, 01:45 AM IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಡೆದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಸಾಹಿತಿ ರೋಹಿಣಿ ಅವರನ್ನು ಸನ್ಮಾನಿಸಲಾಯಿತು | Kannada Prabha

ಸಾರಾಂಶ

ಮಹಿಳಾಪರ ಚಿಂತನೆಗಳು ಕೇವಲ ಪಾಶ್ಚಿಮಾತ್ಯ ರಾಷ್ಟ್ರಗಳ ಕಲ್ಪನೆಯಲ್ಲ, ಭಾರತೀಯ ತಾತ್ವಿಕ ಚಿಂತನೆಗಳಲ್ಲಿಯೂ ಮಹಿಳಾಪರ ಹೋರಾಟದ ಧ್ವನಿಗಳಿವೆ. ಮಹಿಳಾ ವಾದಕ್ಕೆ ಭಾರತ ತವರೂರಾಗಿದೆ ಎಂದು ಚಿಂತಕಿ ಲೇಖಕಿ ಬಿ.ಎಂ ರೋಹಿಣಿ ಹೇಳಿದರು.

ಉಡುಪಿ: ಮಹಿಳಾಪರ ಚಿಂತನೆಗಳು ಕೇವಲ ಪಾಶ್ಚಿಮಾತ್ಯ ರಾಷ್ಟ್ರಗಳ ಕಲ್ಪನೆಯಲ್ಲ, ಭಾರತೀಯ ತಾತ್ವಿಕ ಚಿಂತನೆಗಳಲ್ಲಿಯೂ ಮಹಿಳಾಪರ ಹೋರಾಟದ ಧ್ವನಿಗಳಿವೆ. ಮಹಿಳಾ ವಾದಕ್ಕೆ ಭಾರತ ತವರೂರಾಗಿದೆ ಎಂದು ಚಿಂತಕಿ ಲೇಖಕಿ ಬಿ.ಎಂ ರೋಹಿಣಿ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಉಡುಪಿ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದ ಸಹಯೋಗದಲ್ಲಿ ನಡೆದ ವಿಶ್ವಮಹಿಳಾ ದಿನಾಚರಣೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.

ನಮ್ಮ ದೇಶದ ಪುರಾಣ ಮತ್ತು ಇತಿಹಾಸಗಳನ್ನು ವಾಸ್ತವಿಕ ದೃಷ್ಟಿಕೋನದಿಂದ ವಿಶ್ಲೇಷಿಸಿದರೆ ಇದನ್ನು ಕಾಣಬಹುದು. ಈ ಚಿಂತನೆಯು ನಮ್ಮ ದೇಶದ ಸ್ತ್ರೀಯರಲ್ಲಿ ಆತ್ಮಭಿಮಾನವನ್ನು ಹೆಚ್ಚಿಸಿ ಸಂವಿಧಾನವು ಪ್ರತಿಪಾದಿಸುವ ಸಮಾನತೆಯನ್ನು ಪ್ರತಿಪಾದಿಸಲು ದಾರಿಯಾಗುತ್ತದೆ ಎಂದರು. ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ಸಭಾಪತಿ ಬಸರೂರು ರಾಜೀವ ಶೆಟ್ಟಿ ಅವರು ಉದ್ಘಾಟಿಸಿದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಆಶಯ ಭಾಷಣ ಮಾಡಿದರು. ಬಿ.ಎಂ ರೋಹಿಣಿ ಕಾರಂತರ ಮಹಿಳಾ ಪರ ಚಿಂತನೆಗಳು ಮತ್ತು ಪ್ರೊ.ದಿವ್ಯರಾಣಿ ಪ್ರದೀಪ್ ಮಹಿಳಾ ಸಬಲೀಕರಣದ ಸವಾಲುಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಲೇಖಕಿಯರ ವಾಚಕಿಯರ ಸಂಘದ ಸ್ಥಾಪಕಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ರೆಡ್ ಕ್ರಾಸ್ ಉಪಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ., ಖಜಾಂಚಿ ರಮಾದೇವಿ ಉಪಸ್ಥಿತರಿದ್ದರು. ಕಾಲೇಜಿನ ಮಹಿಳಾ ಸಂಘದ ಸಂಚಾಲಕಿ ವಿದ್ಯಾ ಡಿ ಸನ್ಮಾನ ಪತ್ರ ವಾಚಿಸಿದರು. ವಿದ್ಯಾರ್ಥಿನಿ ದಿಶಾ ಪ್ರಾರ್ಥಿಸಿದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಸ್ವಾಗತಿಸಿದರು.

ಜಿಲ್ಲಾ ಲೇಖಕಿಯರ ವಾಚಕಿಯರ ಸಂಘದ ಸ್ಥಾಪಕಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ರೆಡ್ ಕ್ರಾಸ್ ಉಪಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ ರೆಡ್ ಕ್ರಾಸ್ ಸಂಸ್ಥೆಯ ಖಜಾಂಚಿ ರಮಾದೇವಿ ಉಪಸ್ಥಿತರಿದ್ದರು. ಉಪನ್ಯಾಸಕಿ ತ್ರಿವೇಣಿ ನಿರೂಪಿಸಿದರೆ. ಜಿಲ್ಲಾ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷೆ ಡಾ.ನಿಕೇತನ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

14ರಂದು ದ.ಕ. ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ ಅದಾಲತ್‌
ಎಲ್‌ಪಿಜಿ ಬೆಲೆ ಏರಿಕೆ: ಹೆದ್ದಾರಿ ಮಧ್ಯೆ ಚಹಾ ಮಾಡಿ ಕಾಂಗ್ರೆಸ್ ಪ್ರತಿಭಟನೆ