ಧಾರವಾಡ:
ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಅವರು, ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲೆಯ ಎಲ್ಲ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನಾ ಮಹಿಳಾ ಫಲಾನುಭವಿಗಳ ಸಮಾವೇಶ ಮಾಡಿ, ಮಹಿಳಾ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದೆ ಎಂದರು.
ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ವರ್ಗಗಳಿಗೂ ತಲುಪಬೇಕು. ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ತಲುಪಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು.ಶಕ್ತಿ ಯೋಜನೆಯಡಿ ಜಿಲ್ಲೆಗೆ ಹೊಸದಾಗಿ 70 ಬಸ್‌ಗಳು ಬಂದಿವೆ. ಮಕ್ಕಳು ಶಾಲೆಗೆ ಹೋಗುವ ಸಮಯದಲ್ಲಿ ಹಾಗೂ ಸಂಜೆ ಮನೆಗೆ ವಾಪಸ್ಸಾಗುವ ಸಮಯದಲ್ಲಿ ಸಮರ್ಪಕ ಬಸ್ ವ್ಯವಸ್ಥೆಯನ್ನು ಅಧಿಕಾರಿಗಳು ಕಲ್ಪಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಇರುವ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸಂಚರಿಸುವಂತೆ ಕ್ರಮಕೈಗೊಳ್ಳಬೇಕು ಎಂದ ಎಸ್.ಆರ್. ಪಾಟೀಲ, ಅನ್ನಭಾಗ್ಯ ಯೋಜನೆ, ಗೃಹ ಜ್ಯೋತಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಂದ ಉತ್ತಮ ಅಭಿಪ್ರಾಯ ರೂಪಗೊಳ್ಳುವಂತೆ ಕ್ರಮವಹಿಸಲು ಸೂಚಿಸಿದರು. ಜಿಪಂ ಸಿಇಒ ಭುವನೇಶ ಪಾಟೀಲ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಇಲಾಖಾ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿದೆ. ಗ್ಯಾರಂಟಿ ಯೋಜನೆಗಳ ಮೂಲಕ ನೀಡುವ ಸಹಾಯಧನ ಆರ್ಥಿಕ ಸಬಲೀಕರಣ ಮತ್ತು ಸಶಕ್ತಿಕರಣಕ್ಕೆ ಸಹಾಯವಾಗಬೇಕು. ಯೋಜನೆ ದುರ್ಬಳಕೆ ಮಾಡಿಕೊಂಡವರಿಂದ ಮರಳಿ ಹಣ ಪಡೆಯುವ ಕ್ರಮವಹಿಸಬೇಕು ಎಂದು ನಿರ್ದೇಶಿಸಿದರು.ಪ್ರಾಧಿಕಾರದ ಉಪಾಧ್ಯಕ್ಷ ಮುರಗಯ್ಯಾ ವಿರಕ್ತಮಠ, ಶಾಂತಪ್ಪ ಎಸ್. ಅಕ್ಕಿ, ರೇಹನ್ ರಝಾ ಐನಾಪೂರಿ, ರತ್ನಾ ತೇಗೂರಮಠ ಮಾತನಾಡಿದರು. ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊಗಲಬಾವಿ ಸ್ವಾಗತಿಸಿದರು. ಸದಸ್ಯರಾದ ಬಸಪ್ಪ ಮಹಾಬಲೇಶ್ವರ ಬಾವುಕಾರ, ಅರವಿಂದ ಏಗನಗೌಡರ, ಶಿವಾನಂದ ಭೂಮಣ್ಣವರ, ಸಾವಿತ್ರಿ ಬಸವರಾಜ ಭಗವತಿ, ಸತೀಶ ಚನ್ನಬಸಯ್ಯ ಕೊಬ್ಬಯ್ಯನವರ ಇದ್ದರು.