ಕನ್ನಡಪ್ರಭ ವಾರ್ತೆ ಹೂವಿನಹಡಗಲಿ
ಇಲ್ಲಿನ ಜಿಬಿಆರ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ನಾರಿ ಶಿಕ್ಷಣ ಪಡೆದು ತಾಂತ್ರಿಕ, ಸಂಶೋಧನೆ ಮತ್ತು ಉತ್ಪಾದನೆ ಕ್ಷೇತ್ರದಲ್ಲಿ ಬಹು ದೊಡ್ಡ ಸಾಧನೆ ಮಾಡಿದ್ದಾರೆ ಎಂದರು.
ವಿಶ್ವ ಮಹಿಳಾ ದಿನಾಚರಣೆಯು 1900ರಿಂದಲೂ ಆಚರಿಸಲಾಗುತ್ತಿದೆ. ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ಪ್ರಮುಖವಾಗಿದ್ದು, ಮಹಿಳೆಯನ್ನು ಗೌರವಿಸುವ ಮತ್ತು ಅವಳಿಗೆ ಸ್ವಾತಂತ್ರ್ಯವನ್ನು ನೀಡುವಂತಹ ಸಮಾಜವನ್ನು ನಾವು ನಿರ್ಮಾಣ ಮಾಡಬೇಕಿದೆ ಎಂದರು.ಪ್ರಾಚಾರ್ಯ ಎಸ್.ಎಸ್. ಪಾಟೀಲ ಮಾತನಾಡಿ, ದೇಶದಲ್ಲಿ ಸ್ತ್ರೀ, ಪುರುಷ ಲಿಂಗಾನುಪಾತದಲ್ಲಿ ವ್ಯತ್ಯಾಸವಿದೆ. ಪಾಲಕರು ಹೆಣ್ಣು ಎಂಬ ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಹೆಣ್ಣು ಮಕ್ಕಳು ಜನಿಸಿದರೇ ಸಂಭ್ರಮಿಸುವ ಬದಲು ಸಂಕಟ ಪಡುವ ವಾತಾವರಣ ನಿರ್ಮಾಣವಾಗುತ್ತಿರುವುದು ಖೇದಕರ ಸಂಗತಿಯಾಗಿದೆ ಎಂದರು.
ಐಕ್ಯೂಎಸಿ ಸಂಯೋಜಕಿ ಡಾ. ಮಹಿಮಾ ಜ್ಯೋತಿ ಮಾತನಾಡಿ, ಗ್ರಾಮೀಣ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಕೊಡಿಸುವುದರಿಂದ ಉನ್ನತ ಮಟ್ಟದ ಸಾಧನೆ ಮಾಡಲು ಹಾಗೂ ಆತ್ಮಸ್ಥೆರ್ಯ ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದರು.