ಡಿಸೆಂಬರ್‌ 15ರಂದು ರ್‍ಯಾಪಿಡ್‌ ಆಶ್ರಯದಲ್ಲಿ ಮಹಿಳಾ ಉದ್ಯೋಗ ಮೇಳ

KannadaprabhaNewsNetwork |  
Published : Dec 12, 2024, 12:33 AM IST
11ಡಿಡಬ್ಲೂಡಿ3 | Kannada Prabha

ಸಾರಾಂಶ

ಪದವಿ, ಡಿಪ್ಲೊಮಾ, ಸ್ನಾತಕೋತ್ತರ, ಪಿಯುಸಿ, ಎಸ್ಸೆಸ್ಸೆಲ್ಸಿ ಶಿಕ್ಷಣ ಪಡೆದವರೂ ಮೇಳದಲ್ಲಿ ಭಾಗವಹಿಸಬಹುದಾಗಿದೆ. 40ಕ್ಕೂ ಹೆಚ್ಚು ಕಂಪನಿಗಳು 5000 ಉದ್ಯೋಗಾವಕಾಶಗಳೊಂದಿಗೆ ಪಾಲ್ಗೊಳ್ಳಲಿವೆ.

ಧಾರವಾಡ:

ಇಲ್ಲಿಯ ಜನತಾ ಶಿಕ್ಷಣ ಸಮಿತಿಯು ರ್‍ಯಾಪಿಡ್‌ ​ ಸಂಸ್ಥೆ ಆಶ್ರಯದಲ್ಲಿ ಡಿ. 15ರಂದು ವಿದ್ಯಾಗಿರಿಯ ಜೆಎಸ್​ಎಸ್​ ಕಾಲೇಜು ಆವರಣದಲ್ಲಿ ಮಹಿಳಾ ಉದ್ಯೋಗ ಮೇಳ ಆಯೋಜಿಸಿದೆ ಎಂದು ಜೆಎಸ್‌ಎಸ್‌ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೆ ರ್‍ಯಾಪಿಡ್‌ ​ ಸಹಯೋಗದಲ್ಲಿ ಮೂರು ಯಶಸ್ವಿ ಉದ್ಯೋಗ ಮೇಳ ಆಯೋಜಿಸಿದ್ದು, ಇದರಲ್ಲಿ 45 ಕಂಪನಿಗಳು 6500 ಹುದ್ದೆಗಳಿಗಾಗಿ ಸಂದರ್ಶನ ನಡೆಸಿವೆ. ಇದರಲ್ಲಿ 2500ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದರು. 979 ಅಭ್ಯರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾಗಿದ್ದರಲ್ಲದೇ, 85 ಜನರಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡಲಾಗಿದೆ. ಪ್ರಸ್ತುತ ಮೇಳದಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ ಎಂದರು.

ಬೆಳಗ್ಗೆ 9.30ಕ್ಕೆ ಮೇಳಕ್ಕೆ ಚಾಲನೆ ನೀಡಲಾಗುವುದು. ಅತಿಥಿಗಳಾಗಿ ಕರ್ನಾಟಕ ಕಾನೂನು ವಿವಿ ಕುಲಸಚಿವೆ ಅನುರಾಧಾ ವಸ್ತ್ರದ, ಮಯೂರ ಕಾಂಬಳೆ ಆಗಮಿಸುವರು. ರ್‍ಯಾಪಿಡ್‌ ಕಾರ್ಯದರ್ಶಿ ವಾಣಿಶ್ರೀ ಪುರೋಹಿತ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.

5000 ಅವಕಾಶ:

ರ್‍ಯಾಪಿಡ್‌ ​ ಸಿಇಒ ಮಾಳವಿಕಾ ಕಡಕೋಳ ಮಾತನಾಡಿ, ಪದವಿ, ಡಿಪ್ಲೊಮಾ, ಸ್ನಾತಕೋತ್ತರ, ಪಿಯುಸಿ, ಎಸ್ಸೆಸ್ಸೆಲ್ಸಿ ಶಿಕ್ಷಣ ಪಡೆದವರೂ ಮೇಳದಲ್ಲಿ ಭಾಗವಹಿಸಬಹುದಾಗಿದೆ. 40ಕ್ಕೂ ಹೆಚ್ಚು ಕಂಪನಿಗಳು 5000 ಉದ್ಯೋಗಾವಕಾಶಗಳೊಂದಿಗೆ ಪಾಲ್ಗೊಳ್ಳಲಿವೆ ಎಂದರು.ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಮೇಳದ ದಿನ ಸಹ ಸ್ಥಳದಲ್ಲೇ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ವಿಕಲಚೇತನರಿಗೆ ಉದ್ಯೋಗ ಕಲ್ಪಿಸುವ ಕಂಪನಿಗಳು ಮೇಳದಲ್ಲಿ ಭಾಗವಹಿಸುತ್ತಿವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪ್ರಾಚಾರ್ಯ ಮಹಾವೀರ ಉಪಾಧ್ಯೆ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ