ಕನ್ನಡಪ್ರಭ ವಾರ್ತೆ ಕಾರ್ಕಳ
ಅತ್ತೂರು ಸೈಂಟ್ ಲಾರೆನ್ಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸುಬ್ರಹ್ಮಣ್ಯ ಉಪಾಧ್ಯ ಬಿ ಉಪನ್ಯಾಸ ನೀಡಿ ಮಾತನಾಡಿ, ಗೋಪಾಲ ಕೃಷ್ಣ ಅಡಿಗರು ನಾಡು ಕಂಡ ಶ್ರೇಷ್ಠ ಕವಿ. ಸಾರ್ವಕಾಲಿಕ ಮೌಲ್ಯಗಳನ್ನು ತಮ್ಮ ಬರವಣಿಗೆಯ ಮೂಲಕ ಜನರಿಗೆ ತಲುಪಿಸಿ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ ಅವರು ಸಾಹಿತ್ಯ ಲೋಕಕ್ಕೆ ಹೊಸ ಚೈತನ್ಯ ನೀಡಿದರು ಎಂದರು.
ಅವರು ಗೋಪಾಲಕೃಷ್ಣ ಅಡಿಗರ ಸಾಹಿತ್ಯದ ಕುರಿತು ವಿಸ್ತೃತ ಮಾಹಿತಿ ನೀಡಿದರು.ಕಾರ್ಕಳ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ವನಿತಾ ಶೆಟ್ಟಿ ಮಾತನಾಡಿ, ಗೋಪಾಲ ಕೃಷ್ಣ ಅಡಿಗರು ಯುಗ ಪ್ರಜ್ಞೆಯ ಕವಿ. ನವ್ಯ ಪ್ರಕಾರಗಳನ್ನು ಜನಮನಗಳಿಗೆ ತಲುಪಿಸಿದ ಅವರ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಕಲೆ ಮತ್ತು ಸಾಹಿತ್ಯದ ಬಗೆಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಶಿಬಿರದಲ್ಲಿ ಪಾಲ್ಗೊಂಡ ೩೫ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.ಯಕ್ಷ ರಂಗಾಯಣ ಕಾರ್ಕಳದ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಸ್ವಾಗತಿಸಿದರು