ಗ್ರಾಪಂ-ಎಸ್‌ಡಿಎಂಸಿ ಮಧ್ಯೆ ಕಾಮಗಾರಿ ತಿಕ್ಕಾಟ

KannadaprabhaNewsNetwork |  
Published : Sep 25, 2024, 12:50 AM IST
24ಸಿಡಿಎನ್‌1 | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಚಡಚಣ ತಾಲ್ಲೂಕಿನ ಉಮರಜ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದ್ದು ಕೂಡಲೇ ಪೂರ್ಣಗೊಳಿಸುವಂತೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸೇರಿದಂತೆ ಸದಸ್ಯರು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರೌಢ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಚಿದಾನಂದ ಭೂಪಾಳಿ, ಶಾಲಾ ಕಾಂಪೌಂಡ್‌, ಆಟದ ಮೈದಾನ ಹಾಗೂ ಶೌಚಾಲಯ ನಿರ್ಮಾಣಕ್ಕೆ ಸುಮಾರು ₹ 56 ಲಕ್ಷ ಮಂಜೂರಾತಿ ದೊರಕಿದೆ.

ಕನ್ನಡಪ್ರಭ ವಾರ್ತೆ ಚಡಚಣ

ತಾಲ್ಲೂಕಿನ ಉಮರಜ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದ್ದು ಕೂಡಲೇ ಪೂರ್ಣಗೊಳಿಸುವಂತೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸೇರಿದಂತೆ ಸದಸ್ಯರು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರೌಢ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಚಿದಾನಂದ ಭೂಪಾಳಿ, ಶಾಲಾ ಕಾಂಪೌಂಡ್‌, ಆಟದ ಮೈದಾನ ಹಾಗೂ ಶೌಚಾಲಯ ನಿರ್ಮಾಣಕ್ಕೆ ಸುಮಾರು ₹ 56 ಲಕ್ಷ ಮಂಜೂರಾತಿ ದೊರಕಿದೆ. ಈ ಎಲ್ಲ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಶಾಲಾ ಕಾಂಪೌಂಡ್‌ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳದಿರುವುದರಿಂದ ಶಾಲೆಯ 4.8 ಎಕರೆ ನಿವೇಶನದ ಅರ್ಧದಷ್ಟು ಸ್ಥಳವನ್ನು ಸಾರ್ವಜನಿಕರು ಅತಿಕ್ರಮಿಸಿಕೊಂಡಿದ್ದಾರೆ.

ಶಾಲಾ ಆವರಣದಲ್ಲಿ ದನ ಕರುಗಳನ್ನು ಕಟ್ಟಲಾಗುತ್ತಿದೆ. ಶಾಲಾ ಆವರಣದಲ್ಲಿಯೇ ರಾಶಿ ಮಾಡುವದು, ಶೌಚ ಮಾಡುವುದು, ಮದ್ಯೆ ಸೇವಿಸುವುದು ಸೇರಿದಂತೆ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಈ ಎಲ್ಲ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿರುವದನ್ನು ನೋಡಿದರೇ ಅದರ ಹಿಂದೆ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಮಾಡಿದ್ದಾರೆ.

ಈ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಲ್.ಎಫ್‌.ನದಾಫ, ಆಟದ ಮೈದಾನಕ್ಕೆ ₹ 16.5 ಲಕ್ಷ ಮಂಜೂರಾತಿ ದೊರಕ್ಕಿದ್ದು, ಎನ್‌ಆರ್‌ಇಜಿ ಅಡಿಯಲ್ಲಿ ಕಾಮಗಾರಿಕೈಗೊಳ್ಳಲಾಗಿದೆ. ಖೋ ಖೋ, ಕಬಡ್ಡಿ, ವಾಲಿಬಾಲ್‌, ಬಾಸ್ಕೆಟ್‌ ಬಾಲ್‌, ರನ್ನಿಂಗ್‌ ಟ್ರ್ಯಾಕ್‌ ನಿರ್ಮಾಣ ಕಾರ್ಯ ಶೇ.75 ರಷ್ಟು ಪೂರ್ಣಗೊಂಡಿದೆ. ಕಾಮಗಾರಿಗೆ ತಕ್ಕಂತೆ ₹ 12 ಲಕ್ಷ ಹಣವನ್ನು ಗುತ್ತಿಗೆದಾರರಿಗೆ, ಕಾರ್ಮಿಕರಿಗೆ ಬಿಡುಗಡೆಗೊಳಿಸಲಾಗಿದೆ. ಕಂಪೌಂಡ್‌ ನಿರ್ಮಾಣಕ್ಕೆ ₹ 32 ಲಕ್ಷ ಹಣ ಮಂಜೂರಾಗಿದೆ. ಕಂಪೌಂಡ್ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದ್ದು, ಅದರಲ್ಲಿ ಶೇ.30 ರಷ್ಟು ಹಣ ಬಿಡುಗಡೆಯಾಗಿದೆ. ವಿದ್ಯಾರ್ಥಿನಿಯರ ಶೌಚಾಲಯಕ್ಕೆ ₹ 8 ಲಕ್ಷ ಹಣ ಮಂಜೂರಾಗಿದ್ದು, 2 ಶೌಚಾಲಯ ನಿರ್ಮಿಸಲಾಗಿದೆ. ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು ಸುಮಾರು ₹ 5 ಲಕ್ಷ ಹಣ ಬಿಡುಗಡೆಗೊಳಿಸಿದೆ. ಆದರೆ, ಬಾಕಿ ಬಿಲ್‌ ತಡೆ ಹಿಡಿಯಲಾಗಿದೆ ಎಂದು ತಿಳಿಸಿದ ಅವರು, ಕಾಮಗಾರಿ ಅರ್ಧಕ್ಕೆ ನಿಲ್ಲಿಸಿ ಹಣ ಲಪಟಾಯಿಸಲಾಗಿದೆ ಎಂಬ ಅರೋಪ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟಪಡಿಸಿದರು.

----------

ಕೋಟ್‌.....

ಉಮರಜ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಪ್ರೌಢ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಕಾರ್ಯ ಪ್ರಗತಿಯಲ್ಲಿವೆ. ಕೂಡಲೇ ಈ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

- ಕೆವೆಸನ್‌ ಸಾವಳೆ, ಗ್ರಾಪಂ ಅಧ್ಯಕ್ಷ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌
ಖಮೇನಿ ಆತ್ಮಕ್ಕೆ ಶಾಂತಿ ದೊರೆಯಲಿ, ಅಮೆರಿಕ ದಾಳಿ ಖಂಡನಾರ್ಹ: ಸಿಎಂ