ನಮೋಶಿ ಗೆಲುವಿಗೆ ಶ್ರಮಿಸಿ: ಸಿವಿಸಿ ಕರೆ

KannadaprabhaNewsNetwork |  
Published : Oct 11, 2026, 03:30 AM IST
ಕೊಪ್ಪಳದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಮಾತನಾಡಿದರು. | Kannada Prabha

ಸಾರಾಂಶ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶಿಲ್ ನಮೋಶಿ ಅವರ ಗೆಲುವು ಖಚಿತವಾಗಿದ್ದು, ಅವರ ಗೆಲುವಿಗೆ ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಕರೆ ನೀಡಿದರು.

ಕೊಪ್ಪಳ: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶಿಲ್ ನಮೋಶಿ ಅವರ ಗೆಲುವು ಖಚಿತವಾಗಿದ್ದು, ಅವರ ಗೆಲುವಿಗೆ ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಕರೆ ನೀಡಿದರು.

ನಗರದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಆರೋಪಗಳು, ಬರ ನಿರ್ವಹಣೆ ಹಾಗೂ ಆಂತರಿಕ ಕಲಹಗಳಿಂದ ಶಿಕ್ಷಕರು ಬೇಸತ್ತಿದ್ದಾರೆ. ಶಿಕ್ಷಕರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ಸೂಕ್ತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿಲ್ಲ ಎಂಬ ಅಸಮಾಧಾನ ಶಿಕ್ಷಕರಲ್ಲಿದೆ ಎಂದು ಹೇಳಿದರು.

ಜನರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದಾಗ ಪೊಲೀಸ್ ಇಲಾಖೆಯ ಮೂಲಕ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಹ್ಯಾಟಿ-ಮುಂಡರಗಿ ಗ್ರಾಮದಲ್ಲಿ ಅಮಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ದೂರಿದರು. ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ ಎಂದೂ ಹೇಳಿದರು.

ಮೈತ್ರಿಯಿಂದ ಐತಿಹಾಸಿಕ ಗೆಲುವಿನ ವಿಶ್ವಾಸ: ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಮಾತನಾಡಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಸ್ಪರ್ಧಿಸುವ ಕುರಿತು ಎರಡೂ ಪಕ್ಷಗಳಲ್ಲಿ ಒಲವಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಮೈತ್ರಿ ಪಕ್ಷಗಳು ಒಗ್ಗಟ್ಟಾಗಿ ಹೋರಾಟ ನಡೆಸಲಿವೆ ಎಂದರು.

ಜೆಡಿಎಸ್ ತಾಲೂಕು ಗೌರವಾಧ್ಯಕ್ಷ ಈಶಪ್ಪ ಮಾದಿನೂರು ಮಾತನಾಡಿ, ಮೂರು ವರ್ಷಗಳ ಬಳಿಕ ಶಾಸಕರಿಗೆ ಗ್ರಾಮೀಣ ಪ್ರದೇಶ ನೆನಪಾಗಿದೆ ಎಂದು ಟೀಕಿಸಿದರು.

ಜೆಡಿಎಸ್ ಜಿಲ್ಲಾ ವಕ್ತಾರ ಮಲ್ಲನಗೌಡ ಕೋನನಗೌಡ್ರು ಮಾತನಾಡಿ, ಶಿಕ್ಷಕರ ಪರವಾಗಿ ಮೈತ್ರಿ ಪಕ್ಷಗಳು ಕೈಗೊಂಡಿರುವ ಕಾರ್ಯಗಳು ನಮೋಶಿ ಅವರ ಗೆಲುವಿಗೆ ಪೂರಕವಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಬಿಜೆಪಿಯೊಂದಿಗೆ ಸಮನ್ವಯ ಸಾಧಿಸಿ ಪಕ್ಷ ಸಂಘಟನೆ ಬಲಪಡಿಸುವುದು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣವೂ ನಡೆಯಿತು. ವಿಧಾನ ಪರಿಷತ್ ಚುನಾವಣೆಗೆ ಕೊಪ್ಪಳ ಜಿಲ್ಲಾ ಉಸ್ತುವಾರಿಗಳಾಗಿ ನೇಮಕಗೊಂಡ ಸಿ.ವಿ. ಚಂದ್ರಶೇಖರ ಹಾಗೂ ಸುರೇಶ ಭೂಮರಡ್ಡಿ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ತಾಲೂಕು ಘಟಕದ ಅಧ್ಯಕ್ಷ ವೀರೇಶಗೌಡ್ರು ದಳಪತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಯಲ್ಲೂ ದೋಸ್ತಿ ಮುಂದುವರಿಯಲಿ!
ಸಂಕಷ್ಟಕ್ಕೆ ಅಂಜದೇ ಆತ್ಮವಿಶ್ವಾಸದಿಂದ ಬದುಕು ಸಾಗಿಸಿ: ಮುರುಳೀಧರ ಹೆಗಡೆ