ಕನ್ನಡಪ್ರಭ ವಾರ್ತೆ ಖಾನಾಪುರ
ಪಟ್ಟಣದ ಕೆಎಲ್‌ಇ ಬಿಸಿಎ ಕಾಲೇಜಿನ ಸಭಾಗೃಹದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಿಮ ಸೆಮಿಸ್ಟರ್ ಬಿಸಿಎ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಗೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣದ ಕೆಎಲ್‌ಇ ಸಂಸ್ಥೆಯ ಬಿಸಿಎ ಕಾಲೇಜಿನ ಅಂತಿಮ ಬಿಸಿಎ ಸೆಮಿಸ್ಟರ್‌ನ 80 ವಿದ್ಯಾರ್ಥಿಗಳು ಚಿಕ್ಕೋಡಿಯಲ್ಲಿ ಇತ್ತೀಚೆಗೆ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ನಿರ್ವಹಿಸಲು ಆಯ್ಕೆಗೊಂಡಿದ್ದು ಸಂತಸದ ವಿಷಯ. ಕ್ಯಾಂಪಸ್ ಸಂದರ್ಶನದಲ್ಲಿ ಕೆಲಸ ಪಡೆದ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಅಭಿನಂದನಾರ್ಹ ಎಂದು ಶ್ಲಾಘಿಸಿದರು.ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯೆ ರೂಪಾ ಕುಲಕರ್ಣಿ, ಉಪನ್ಯಾಸಕರಾದ ಶಿವಾಲಿ ಪುಠಾಣಿ, ಗಾಯತ್ರಿ ಪತ್ರಿ, ತೇಜಶ್ರೀ ಪಾಟೀಲ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ, ಪಾಲಕರು, ವಿದ್ಯಾರ್ಥಿಗಳು ಇದ್ದರು. ಪ್ರಾಂಶುಪಾಲ ಆನಂದ ತಾವಂಶಿ ಅಧ್ಯಕ್ಷತೆ ವಹಿಸಿದ್ದರು. ಸ್ಟೇಲಾ ಫರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು.ಗ್ರ್ಯಾಜುಯೇಶನ್ ಗೌನ್ ತೊಟ್ಟು ಪ್ರಶಂಸನಾ, ನೇಮಕಾತಿ ಪತ್ರ ಸ್ವೀಕರಿಸಿ ವಿದ್ಯಾರ್ಥಿಗಳು!
ವಿಶ್ವವಿದ್ಯಾಲಯಗಳಲ್ಲಿ ಆಯೋಜಿಸುವ ಘಟಿಕೋತ್ಸವದ ಮಾದರಿಯಲ್ಲಿ ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ಆಯೋಜಿಸಲಾಗಿತ್ತು. ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಗ್ರ್ಯಾಜುಯೇಶನ್ ಗೌನ್ ತೊಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಾಲಕರ ಜೊತೆ ಗಣ್ಯರಿಂದ ಪ್ರಶಂಸನಾ ಪತ್ರ ಮತ್ತು ನೇಮಕಾತಿ ಪತ್ರಗಳನ್ನು ಪಡೆದಿದ್ದು ವಿಶೇಷವಾಗಿತ್ತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪಾಲಕರು ತಮ್ಮ ಮಕ್ಕಳ ಭವಿಷ್ಯ ರೂಪಿಸಿದ ಕಾಲೇಜಿನ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು.ಖಾನಾಪುರ ತಾಲೂಕಿನ ಗ್ರಾಮೀಣ ಭಾಗದ ಮತ್ತು ಕೃಷಿ ಕುಟುಂಬದಿಂದ ಬಂದ ವಿದ್ಯಾರ್ಥಿಗಳು ಅಂತಿಮ ವರ್ಷದ ಪದವಿ ಓದುವ ಸಂದರ್ಭದಲ್ಲೇ ಕೈತುಂಬ ಸಂಬಳ ನೀಡುವ ಕೆಲಸ ಪಡೆದು ವೃತ್ತಿ ಜೀವನಕ್ಕೆ ಕಾಲಿಡುತ್ತಿರುವುದು ಉತ್ತಮ ಬೆಳವಣಿಗೆ. ತಾಲೂಕಿನ ಇತಿಹಾಸದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳು ಇಷ್ಟೊಂದು ಗರಿಷ್ಠಮಟ್ಟದಲ್ಲಿ ನೇಮಕಾತಿ ಪಡೆದಿದ್ದು ಇದೇ ಮೊದಲು.