Work hard for the betterment of farmers: Amin Reddy's advice
-ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆಯಾಗಿ ಶರಣಮ್ಮ, ಉಪಾಧ್ಯಕ್ಷರಾಗಿ ನಾಗಪ್ಪಗೌಡ ಆಯ್ಕೆ
------
ಕನ್ನಡಪ್ರಭ ವಾರ್ತೆ ಸುರಪುರ
ಸಹಕಾರ ತತ್ವದಡಿ ನಂಬಿಕೆಯಿಟ್ಟು, ರೈತರ ಶ್ರೇಯೋಭಿವೃದ್ಧಿಗಾಗಿ ಎಲ್ಲ ಸದಸ್ಯರು ಒಗ್ಗಟ್ಟಿನಿಂದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರೆಡ್ಡಿ ಯಾಳಗಿ ಹೇಳಿದರು.
ತಾಲೂಕಿನ ಕೆಂಭಾವಿ ಪಟ್ಟಣದ ಸಮೀಪದ ನಗನೂರ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆ ನಂತರ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಈ ಭಾಗದ ರೈತರಿಗೆ ಹಚ್ಚಿನ ಬಡ್ಡಿ ರಹಿತ ಸಾಲದ ಸೌಲಭ್ಯಗಳನ್ನು ಕಲ್ಪಿಸಬೇಕು. 10 ಲಕ್ಷ ರು. ಗಳವರೆಗೆ ಸಬ್ಸಿಡಿ ರೂಪದಲ್ಲಿ ಸಾಲ ದೊರಕಿಸುವಂತಾಬೇಕು ಎಂದರು.
ಈಚೆಗೆ ನಡೆದ ಚುನಾವಣೆಯಲ್ಲಿ 12 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚಿನ ಮತಗಳಿಂದ ಗೆಲ್ಲಿಸಲಾಗಿದೆ. ಆ ಜವಾಬ್ಧಾರಿಯನ್ನು ಅರಿತು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಎಲ್ಲ ರೈತರು ಆರ್ಥಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದರು.
ಹಿರಿಯ ಬಿಜೆಪಿ ಮುಖಂಡ ಡಾ. ಚಂದ್ರಶೇಖರ ಸುಬೇದಾರ, ರಾಜಶೇಖರ ಗೂಗಲ್, ಬಸವರಾಜ ವಿಭೂತಿಹಳ್ಳಿ ಮಾತನಾಡಿದರು.
ಸಂಘದ ಚುನಾವಣಾಧಿಕಾರಿಯಾಗಿ ಅಬ್ದುಲಬಾಷಾ ಗೋನಾಲ ಕಾರ್ಯನಿರ್ವಹಿಸಿದರು. ಪಿಕೆಪಿಎಸ್ ಕಾರ್ಯನಿರ್ವಾಹಕ ಅಧಿಕಾರಿ ಹಳ್ಳೆರಾಯ ದೇಸಾಯಿ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಮಾಣ ಪತ್ರ ನೀಡಿದರು.
ಫೋಟೊ: 13ವೈಡಿಆರ್7: ಸುರಪುರ ತಾಲೂಕಿನ ಕೆಂಭಾವಿ ಸಮೀಪದ ನಗನೂರ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆಯಾಗಿ ಶರಣಮ್ಮ ಮಲ್ಲಣ್ಣ ಹಾಗೂ ಉಪಾಧ್ಯಕ್ಷರಾಗಿ ನಾಗಪ್ಪಗೌಡ ಆಯ್ಕೆಯಾದವರನ್ನು ಸನ್ಮಾನಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.