- ಚುನಾಯಿತ ನೂತನ ಪದಾಧಿಕಾರಿಗಳಿಗೆ ಶಾಲು ಹೊದಿಸಿ ಅಭಿನಂದನೆ - - - ಕನ್ನಡಪ್ರಭ ವಾರ್ತೆ, ದಾವಣಗೆರೆ ಯುವ ಘಟಕದ ನೂತನ ಪದಾಧಿಕಾರಿಗಳು ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಬೇಕು. ಆ ಮೂಲಕ ಪಕ್ಷವನ್ನು ಬಲಪಡಿಸಿ, ಮುಂಬರುವ ಎಲ್ಲ ಚುನಾವಣೆಗಳಲ್ಲಿಯು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪಣತೊಡುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಮಹಿಳಾ ಘಟಕದಲ್ಲಿ ಮಹಿಳೆಯರ ಸಂಖ್ಯೆ ಕಡಿಮೆ ಇದೆ ಎಂಬುದು ಕಂಡುಬಂದಿದೆ. ಮುಂಬರುವ ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಸೇರಿದಂತೆ ಎಲ್ಲ ಭಾಗಗಳಲ್ಲಿ ಪಕ್ಷವನ್ನು ಬಲಪಡಿಸಬೇಕಿದೆ. ಮಹಿಳಾ ಘಟಕದಲ್ಲಿ ಮಹಿಳೆಯರ ಹೆಚ್ಚು ನೋಂದಣಿ ಮಾಡಿಸಿ ಮಹಿಳಾ ಘಟಕವನ್ನು ಇನ್ನಷ್ಟು ಬಲಪಡಿಸಬೇಕು ಎಂದರು.
ಚುನಾವಣೆಗಳಲ್ಲಿ ಟಿಕೆಟ್ ಪೈಪೋಟಿ ಸಾಮಾನ್ಯವಾಗಿದೆ. ವರಿಷ್ಠರು ಆಯ್ಕೆ ಮಾಡುವ ಅಭ್ಯರ್ಥಿಗಳಿಗೆ ಆಕಾಂಕ್ಷಿಗಳು, ಟಿಕೆಟ್ ವಂಚಿತರು, ವೈಮನಸ್ಸು ಬಿಟ್ಟು ಒಗ್ಗಟ್ಟು ಪದರ್ಶಿಸಬೇಕು. ಪಕ್ಷವು ಸೂಚಿಸುವ ಅಭ್ಯರ್ಥಿಯನ್ನು ಹಾಗೂ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
- - - -9ಕೆಡಿವಿಜಿ31.ಜೆಪಿಜಿ:ದಾವಣಗೆರೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬ್ಲಾಕ್ ಕಾಂಗ್ರೆಸ್ ಯುವ ಘಟಕದಿಂದ ಚುನಾಯಿತರಾದ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿದರು.