ನಾಡಿನ ಒಳಿತಿಗಾಗಿ ಶ್ರಮಿಸಿ: ಶಾಸಕ ಎ.ಎಸ್.ಪೊನ್ನಣ್ಣ

KannadaprabhaNewsNetwork |  
Published : Nov 05, 2025, 12:45 AM IST
ಭಾಗಮಂಡಲದ ಅರೆಭಾಷಿಕ ಗೌಡ ಜನಾಂಗದ ಶಾಸಕರ ಅಭಿಮಾನಿಗಳ ವತಿಯಿಂದ ಭಾಗಮಂಡಲದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ನಮ್ಮ ನಾಡು ಸುಖ ಶಾಂತಿ ಸಮೃದ್ಧಿ ಸೌಹಾರ್ದತೆಯಿಂದ ಇರಬೇಕಾದರೆ ಎಲ್ಲರೂ ಒಂದೇ ಎಂಬ ಭಾವನೆಯಿಂದ ಪರಸ್ಪರ ಸೌಹಾರ್ದತೆಯಿಂದ ಎಲ್ಲಾ ಕೆಲಸ ಕಾರ್ಯಗಳನ್ನು ಮಾಡಬೇಕು ಎಂದು ಶಾಸಕರು ತಿಳಿಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ನಮ್ಮ ನಾಡು ಸುಖ-ಶಾಂತಿ, ಸಮೃದ್ಧಿ ಹಾಗೂ ಸೌಹಾರ್ದತೆಯಿಂದ ಇರಬೇಕಾದರೆ ಎಲ್ಲರೂ ಒಂದೇ ಎಂಬ ಭಾವನೆಯಿಂದ ಪರಸ್ಪರ ಸೌಹಾರ್ದತೆಯಿಂದ ಎಲ್ಲಾ ಕೆಲಸ ಕಾರ್ಯಗಳನ್ನು ಮಾಡಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಭಾಗಮಂಡಲದ ಲ್ಯಾಂಪ್ ಸೊಸೈಟಿ ಸಭಾಂಗಣದಲ್ಲಿ ಅರೆಭಾಷಿಕ ಗೌಡ ಜನಾಂಗದ ಶಾಸಕರ ಅಭಿಮಾನಿಗಳ ವತಿಯಿಂದ ಗುರುವಾರ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ತಾಯಿ ಕಾವೇರಿಯ ಆಶೀರ್ವಾದ ಎಲ್ಲರ ಮೇಲಿರಬೇಕೆಂದರೆ ಎಲ್ಲರೂ ತಾಯಿಯ ಇಚ್ಛೆಯಂತೆ ನಾಡಿನ ಒಳಿತಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಪವಿತ್ರ ಕಾವೇರಿ ತುಲಾ ಸಂಕ್ರಮಣ ಸಂದರ್ಭ ಶಾಸಕರು ಅತ್ಯಂತ ಅಚ್ಚುಕಟ್ಟಾಗಿ, ಸೌಹಾರ್ದಯುತವಾಗಿ ಎಲ್ಲಾ ಜನಾಂಗದವರು ತಾಯಿ ಕಾವೇರಿ ತೀರ್ಥ ಸ್ವರೂಪಿಣಿಯಾಗಿ ಉಗಮಿಸುವುದನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭ ಅರಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ಸೂರಜ್ ಹೊಸೂರು, ಅರಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿರ್ದೇಶಕ ಕುದುಪಾಜೆ ಪ್ರಕಾಶ್, ಕೊಡಗು ಗೌಡ ವಿದ್ಯಾ ಸಂಘದ ನಿರ್ದೇಶಕ ದೇವಂಗೋಡಿ ಹರ್ಷ, ಚೇರಂಬಾಣೆ ಗೌಡ ಸಮಾಜದ ನಿರ್ದೇಶಕ ಕೊಡಗನ ತೀರ್ಥ ಪ್ರಸಾದ್, ತಾವೂರು ಭಗವತಿ ದೇವಾಲಯದ ಅಧ್ಯಕ್ಷ ಕೋಳಿ ಬೈಯಲು ವೆಂಕಟೇಶ್, ದೇವಂಗೋಡಿ ತಿಲಕ ಸುಬ್ರಾಯ, ತಾಲೂಕು ಕೆ ಡಿ ಪಿ ಸದಸ್ಯ, ಹಾಗೂ ಚುನಾಯಿತ ಪ್ರತಿನಿಧಿಗಳು , ರಾಜಕೀಯ ಪಕ್ಷದ ಪ್ರಮುಖರು ಹಾಗೂ ಅರೆಭಾಷಿಕ ಗೌಡ ಜನಾಂಗದ ಶಾಸಕರ ಅಭಿಮಾನಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೃಹಲಕ್ಷ್ಮಿ ಹಣ ಮುಂದಿನ ವಾರ ಖಾತೆಗೆ ಜಮೆ: ಎಂ.ಎಲ್.ದಿನೇಶ್
ಗೆಜ್ಜಲಗೆರೆ ಗ್ರಾಮಸ್ಥರ ಪ್ರತಿಭಟನೆ ರಾಜಕೀಯ ಪ್ರೇರಿತ: ಸತೀಶ್ ಆರೋಪ