- ಮುಖ್ಯೋಪಾಧ್ಯಾಯರೊಂದಿಗೆ ಸಭೆ । ಕಡಿಮೆ ಫಲಿತಾಂಶ ಬಂದ ಶಾಲೆಗಳತ್ತ ನಿಗಾಕ್ಕೆ ಜಿ.ಎಂ.ಗಂಗಾಧರ ಸ್ವಾಮಿ ಸೂಚನೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.75ರಷ್ಟು ಸಮಗ್ರ ಫಲಿತಾಂಶ ಬಂದಿದ್ದು, ಕಡಿಮೆ ಫಲಿತಾಂಶ ಪಡೆದ ಶಾಲೆಗಳ ಬಗ್ಗೆ ಹಾಗೂ ಸಿ (ಸಿ) ಹಾಗೂ ಎನ್ಸಿ (ಎನ್‌ಸಿ - ನಾಟ್ ಕಂಪ್ಲೀಟೆಡ್) ವಿದ್ಯಾರ್ಥಿಗಳ ಶೇಕಡವಾರು ಪಟ್ಟಿಯನ್ನು ಸಿದ್ಧಪಡಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಮತ್ತು ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.ಶುಕ್ರವಾರ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಿಸುವ ಸಂಬಂಧ ಮುಖ್ಯೋಪಾಧ್ಯಾಯರೊಂದಿಗೆ ನಡೆದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಹಾಗೂ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಎಲ್ಲ ಶಾಲೆಗಳಲ್ಲಿ ಮ್ಯಾಕ್ರೋ ಪ್ಲಾನ್ (ಮೂಲ ಯೋಜನೆ) ರೂಪಿಸಿ ಅನುಷ್ಠಾನಕ್ಕೆ ಅಧಿಕಾರಿಗಳು ಸೂಚಿಸಿದರು.
ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರಿಗೆ ''''ಡ್ಯೂಟಿ ಟೀಚರ್'''' ವ್ಯವಸ್ಥೆಯ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರಗತಿಯನ್ನು ಪರಿಶೀಲಿಸಬೇಕು ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಸಂಜೆ ಅಥವಾ ಬಿಡುವಿನ ವೇಳೆಯಲ್ಲಿ ಹೆಚ್ಚುವರಿ ತರಗತಿಗಳನ್ನು ನಡೆಸಿ, ಕಲಿಕೆಯಲ್ಲಿ ಹಿನ್ನಡೆ ಆಗದಂತೆ ಎಚ್ಚರಿಕೆ ವಹಿಸಬೇಕು. ಆರ್ಥಿಕ ಹಾಗೂ ಸಾಮಾಜಿಕ ಹಿನ್ನೆಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಮಾನಸಿಕ ಸ್ಥೈರ್ಯ ತುಂಬಿ, ಉತ್ತಮ ಅಂಕಗಳಿಸಲು ಪ್ರೋತ್ಸಾಹ ನೀಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಾಹಿತ್ಯ ಎಂ. ಆಲದಕಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯೋಪಾಧ್ಯಾಯರು ಹಾಗೂ ಇತರರು ಉಪಸ್ಥಿತರಿದ್ದರು.
-14ಕೆಡಿವಿಜಿ43: ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಮುಖ್ಯೋಪಾಧ್ಯಾಯರೊಂದಿಗೆ ಸಭೆ ನಡೆಯಿತು.