ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಟಿಎಪಿಸಿಎಂಎಸ್ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅ.4 ರಂದು ಚುನಾವಣೆ ನಡೆಯಲಿದೆ. ಸಂಘದ ಎಲ್ಲಾ 12 ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿತರು ಸ್ಪರ್ಧಿಸಿ ಗೆಲುವು ಸಾಧಿಸುವಂತೆ ಕಾರ್ಯಕರ್ತರು ನೋಡಿಕೊಳ್ಳಬೇಕು ಎಂದರು.
ಈ ಬಾರಿ ಮೈಸೂರು ಮತ್ತು ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮಗಳ ನಡುವೆ ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಒತ್ತಡದಲ್ಲಿ, ಮುಂಬರುವ ಟಿಎಪಿಸಿಎಂಎಸ್ ಸೊಸೈಟಿ ಚುನಾವಣೆ ಪೂರ್ವಭಾವಿ ಸಭೆ ಕರೆಯಲು ತಡವಾಗಿದೆ ಎಂದರು.ಕಾಂಗ್ರೆಸ್ ಸರ್ಕಾರದ ಹಲವು ಯೋಜನೆಗಳು ಜನಪರವಾಗಿದೆ. ಈ ಬಗ್ಗೆ ಜನರಲ್ಲಿ ಮಾಹಿತಿಯನ್ನು ತಿಳಿಸಬೇಕು. ಅಲ್ಲದೆ ಸ್ಥಳೀಯ ಚುನಾವಣೆಗೆ ಸ್ಪರ್ಧೆ ಮಾಡಲಿಚ್ಚಿಸುವ ಅಭ್ಯರ್ಥಿಗಳು ಶೀಘ್ರ ತಿಳಿಸಬೇಕು, ಸ್ವರ್ಧಿಗಳು ಯಾರೇ ಆದರು ಒಗ್ಗಟ್ಟಿನಿಂದ ಶ್ರಮಿಸಿ ಪಕ್ಷದ ಅಭ್ಯರ್ಥಿಗಳನ್ನು ಗೆಲುವಿಗೆ ಶ್ರಮಿಸಬೇಕು ಎಂದರು.
ನಾವು ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ಬಾವದಿಂದದರೂ ಗೆಲುವು ಸಾಧಿಸಿ ತೋರಿಸಬೇಕಿದೆ. ಟಿಎಪಿಸಿಎಂಎಸ್ ಆವರಣದ ಜಾಗದಲ್ಲಿ ಒತ್ತುವರಿ ಜಾಗ ಬಿಡಿಸಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿಕೊಟ್ಟರೆ ಸಂಸ್ಥೆ ಇನ್ನಷ್ಟು ಹೆಚ್ಚಿನ ಲಾಭಗಳಿಸಲು ಸಹಕಾರಿಯಾಗುತ್ತದೆ. ಎಲ್ಲರೂ ಒಗ್ಗೂಡಿ ಚುನಾವಣೆಯಲ್ಲಿ ಕೆಲಸ ಮಾಡಿ ಎಂದು ಮನವಿ ಮಾಡಿದರು.
ಇದೇ ವೇಳೆ ಜಿಲ್ಲೆಯ ಮನ್ಮುಲ್ ನಿರ್ದೇಶಕ ಬಿ.ಬೋರೇಗೌಡ, ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ್, ಪುರಸಭೆ ಪ್ರಭಾರ ಅಧ್ಯಕ್ಷ ಎಂ.ಎಲ್.ದಿನೇಶ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಪ್ರಕಾಶ್, ಪಕ್ಷದ ಹಿರಿಯ ಮುಖಂಡರಾದ ಎಂ.ಪುಟ್ಟೇಗೌಡ, ಗಂಗಣ್ಣ, ಎನ್.ವಿ.ಚಲುವರಾಜು, ಬೆಳಗೊಳ ಸ್ವಾಮಿಗೌಡ, ಅನೀಲ್, ಪುರಸಭೆ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು,