೨೦೨೮ಕ್ಕೆ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿ

KannadaprabhaNewsNetwork |  
Published : Aug 03, 2025, 11:45 PM IST
೩ಶಿರಾ೧: ಶಿರಾ ನಗರದ ಸೇವಾ ಸದನದಲ್ಲಿ ಭಾರತೀಯ ಜನತಾ ಪಾರ್ಟಿಯ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಬಿಜೆಪಿ ಪಕ್ಷದ ನೂತನ ಪದಾಧಿಕಾರಿಗಳು ಪಕ್ಷವನ್ನು ತಳಮಟ್ಟದಲ್ಲಿ ಸದೃಢಗೊಳಿಸಿ ಮುಂಬರುವ ೨೦೨೮ಕ್ಕೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ ಬಿಜೆಪಿ ಪಕ್ಷದ ನೂತನ ಪದಾಧಿಕಾರಿಗಳು ಪಕ್ಷವನ್ನು ತಳಮಟ್ಟದಲ್ಲಿ ಸದೃಢಗೊಳಿಸಿ ಮುಂಬರುವ ೨೦೨೮ಕ್ಕೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು. ಅವರು ಭಾನುವಾರ ಸೇವಾ ಸದನದಲ್ಲಿ ಭಾರತೀಯ ಜನತಾ ಪಾರ್ಟಿಯ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ತಮ್ಮ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ ಮುಂಬರುವ ಸವಾಲುಗಳನ್ನು ಎದುರಿಸಲು ಸಜ್ಜಾಗಿ, ಪಕ್ಷದ ವರ್ಚಸ್ಸನ್ನು ಪಕ್ಷದ ತತ್ವ ಸಿದ್ಧಾಂತಗಳಿಗೆ ಒಳಪಟ್ಟು ಪಕ್ಷ ನೀಡಿರುವ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನೆರವೇರಿಸಿ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಚುನಾವಣಾ ಅಧಿಕಾರಿ ಪೂರ್ಣಿಮಾ ಪ್ರಕಾಶ್, ಕೊರಟಗೆರೆ ತಾಲೂಕು ಅಧ್ಯಕ್ಷರಾದ ಅನಿಲ್ ಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಹನುಮಂತೇಗೌಡ, ಗ್ರಾಮಾಂತರ ಮಂಡಲ ಅಧ್ಯಕ್ಷ ಈರಣ್ಣ ಪಟೇಲ್, ನಗರ ಮಂಡಲ ಅಧ್ಯಕ್ಷ ಗಿರಿಧರ್, ನಿಕಟ ಪೂರ್ವ ಗ್ರಾಮಾಂತರ ಅಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ದಿಶಾ ಕಮಿಟಿ ಸದಸ್ಯ ಮದಲೂರು ಮೂರ್ತಿ ಮಾಸ್ಟರ್, ಕೊರಟಗೆರೆ ಮಂಡಲ ಅಧ್ಯಕ್ಷ ರುದ್ರೇಶ್, ಜಿಲ್ಲಾ ಕಾರ್ಯದರ್ಶಿ ವೀರೇಶ್, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಮಂಜಣ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಉಮಾ ವಿಜಯರಾಜ್, ಗೋಪಿಕುಂಟೆ ಕುಮಾರ್ ಮಾಸ್ಟರ್, ತರೂರು ನಾಗಣ್ಣ ಸೇರಿದಂತೆ ಪಕ್ಷದ ಕಾರ್ಯಕರ್ತರು ಪದಾಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌