ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು ಶ್ರಮವಹಿಸಿ: ಸಂಸದೆ

KannadaprabhaNewsNetwork |  
Published : Jan 22, 2026, 02:00 AM IST
ಕ್ಯಾಪ್ಷನ21ಕೆಡಿವಿಜಿ39 ದಾವಣಗೆರೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉದ್ಪಾಟಿಸಿದರು. | Kannada Prabha

ಸಾರಾಂಶ

ಮುಂಬರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶವನ್ನು ಇನ್ನಷ್ಟು ಹೆಚ್ಚಿಸಲು ಮತ್ತು ಜಿಲ್ಲೆಯನ್ನು ಮೊದಲ 5ರ ಸ್ಥಾನದಲ್ಲಿ ಇರುವಂತೆ ಶಿಕ್ಷಕರು, ಮುಖ್ಯೋಪಾಧ್ಯಾಯರು ಶ್ರಮವಹಿಸುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

- ಗುರು ಭವನದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ- ಶೈಕ್ಷಣಿಕ ಕಾರ್ಯಾಗಾರ ।

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಮುಂಬರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶವನ್ನು ಇನ್ನಷ್ಟು ಹೆಚ್ಚಿಸಲು ಮತ್ತು ಜಿಲ್ಲೆಯನ್ನು ಮೊದಲ 5ರ ಸ್ಥಾನದಲ್ಲಿ ಇರುವಂತೆ ಶಿಕ್ಷಕರು, ಮುಖ್ಯೋಪಾಧ್ಯಾಯರು ಶ್ರಮವಹಿಸುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಬುಧವಾರ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಹಾಗೂ ಉಪ ಪ್ರಾಂಶುಪಾಲರ ಸಂಘ ವತಿಯಿಂದ ಗುರುಭವನದಲ್ಲಿ ಏರ್ಪಡಿಸಿದ್ದ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಉದ್ಪಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು 8ನೇ ತರಗತಿಯಲ್ಲಿ ವ್ಯಾಸಂಗ ಮಾಡುವಾಗ ಅವರಿಗೆ ಪ್ರತಿ ವಿಷಯಕ್ಕೆ 2 ಅಧ್ಯಾಯಗಳ ನಂತರ ಕಿರುಪರೀಕ್ಷೆಗಳನ್ನು ಆಯೋಜಿಸಬೇಕು. ಅನಂತರ ಯಾವ ವಿಷಯದಲ್ಲಿ ಹಿಂದುಳಿದಿರುವ ಬಗ್ಗೆ ಗಮನಹರಿಸಿ, ಅವರಿಗೆ ವಿಶೇಷ ತರಗತಿಗಳನ್ನು ಏರ್ಪಡಿಸಬೇಕು. ಅಲ್ಲದೇ, ಅವರನ್ನು ಸತತವಾಗಿ ಗಮನಿಸಿದಲ್ಲಿ ಮಾತ್ರ ಆ ವಿದ್ಯಾರ್ಥಿ ಹೆಚ್ಚು ಅಂಕ ಪಡೆಯಲು ಪ್ರಯತ್ನಿಸುತ್ತಾರೆ. ಅದರ ಫಲವನ್ನು ನೀವು ನೋಡಬಹುದು ಎಂದರು.

ಪರೀಕ್ಷೆ ಸಮೀಪದಲ್ಲಿ ನಾವು ಮಕ್ಕಳಿಗೆ ಕಠಿಣ ಪಠ್ಯಕ್ರಮ ನೀಡುವ ಅವಶ್ಯಕತೆ ಇಲ್ಲ. ಪ್ರತಿ ಶಿಕ್ಷಕರಲ್ಲಿ ನಾವು ಸಾವಿತ್ರಿ ಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ ಅವರನ್ನು ಕಾಣುತ್ತೇವೆ. ನೀವು ಅಭ್ಯಾಸಿಸಿ ವಿದ್ಯಾರ್ಥಿಗಳಿಗೆ ಅದನ್ನೇ ಮನದಟ್ಟು ಮಾಡಿದರೆ ಉತ್ತಮ ಫಲಿತಾಂಶ ಪಡೆಯಬಹುದು. ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ಪೌರಾಣಿಕ ಕಥೆಗಳು, ಸ್ಫೂರ್ತಿದಾಯಕ ಕಥೆಗಳನ್ನು ಅವರಿಗೆ ಹೇಳಬೇಕು. ಹೆಚ್ಚು ಅಂಕ ಪಡೆದ ಹಳೆಯ ವಿದ್ಯಾರ್ಥಿಗಳ ಯಶೋಗಾಥೆ ವಿವರಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಕ್ಲಸ್ಟರ್‌ಗಳನ್ನು ಮಾಡಿಕೊಂಡು, ಶಿಕ್ಷಕರು ಕೊರತೆ ಇದ್ದಲ್ಲಿ ಹತ್ತಿರದಲ್ಲಿನ ಆಯಾ ವಿಷಯದ ಶಿಕ್ಷಕರನ್ನು ನಿಯೋಜಿಸಬೇಕು. ಎಲ್ಲ ಚಟುವಟಿಕೆಗಳನ್ನು ಕೈಗೊಂಡು ಬರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಉತ್ತಮಗೊಳಿಸಲು ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ, ಎಲ್ಲ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಬರಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಶ್ರಮವಹಿಸುವಂತೆ ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಕಳೆದ ಬಾರಿ ರಾಜ್ಯ ಮಟ್ಟದಲ್ಲಿ 24ನೇ ಸ್ಥಾನ ಪಡೆದಿದೆ. ಈ ವರ್ಷ ಇನ್ನೂ ಹೆಚ್ಚಿನ ಸ್ಥಾನ ಪಡೆಯಲು ಕ್ರಮ ವಹಿಸಲಾಗಿದೆ. ಈ ಬಾರಿ ಜೂನ್ ತಿಂಗಳಿಂದ ಕ್ರಿಯಾ ಯೋಜನೆ ತಯಾರಿಸಿದ್ದೇವೆ. ಡಿಸೆಂಬರೊಳಗೆ ಪಠ್ಯ ಮುಗಿಸಿದ್ದು, ಜನವರಿ ತಿಂಗಳಿಂದ ಪಠ್ಯಪುಸ್ತಕ ಆಧಾರಿತ 130-150 ಪ್ರಶ್ನೆಗಳನ್ನು ಸಿದ್ಧಪಡಿಸಿ ವಿದ್ಯಾರ್ಥಿಗಳಿಗೆ ನೀಡಿ ಪ್ರಶ್ನೆಗಳನ್ನು ಯಾವ ರೀತಿ ಉತ್ತರ ಬರೆಯಬೇಕು ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಅನೇಕ ಶಾಲೆಗಳಲ್ಲಿ ಬೆಳಗ್ಗೆ 8ರಿಂದ ಪ್ರಾರಂಭಿಸಿ ರಾತ್ರಿ 8 ರಿಂದ 9 ಗಂಟೆವರೆಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ರಜೆ ದಿನಗಳಂದು ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಪೋಷಕರ ಅನುಮತಿ ಪಡೆದು ಬೆಳಗ್ಗೆ ಮಕ್ಕಳಿಗೆ 5 ಗಂಟೆಗೆ ಕಾಲ್ ಮಾಡಿ ಓದಲು ಕರೆ ಮಾಡಲಾಗುವುದು. ಈಗಾಗಲೇ ಪರೀಕ್ಷಾ ಮಂಡಳಿ 4 ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡಿದ್ದು, ಅದರ ತಯಾರಿ ಸಹ ವಿದ್ಯಾರ್ಥಿಗಳಿಗೆ ಮಾಡಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಸ್ಮರಣಿಕೆ ಮತ್ತು ₹25000 ನಗದ ಬಹುಮಾನವನ್ನು ವಿತರಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

- - -

(ಬಾಕ್ಸ್‌) * ಶೇ.100 ಫಲಿತಾಂಶಕ್ಕಾಗಿ ಸಕಲ ಕ್ರಮ: ಡಿಡಿಪಿಐ 3 ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ಕ್ರಮವಹಿಸಿ ಈಗ ಒಂದು ಪರೀಕ್ಷೆ ನಡೆಸಲಾಗಿದೆ. ಈ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಏರ್ಪಡಿಸಲಾಗಿದೆ. ಪರೀಕ್ಷೆಯನ್ನು ಯಾವ ರೀತಿ ಎದುರಿಸಬಹುದು ಎಂಬುದನ್ನು 36 ಜನ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಅವರಿಂದಲೇ ಯಾವ ರೀತಿ ಉತ್ತರ ಬರೆಯಬೇಕು ಎಂಬುದನ್ನು ತಿಳಿಸಲಾಗುತ್ತಿದೆ. ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಕಡಿಮೆ ಬಂದಿರುವ ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ. ಹಾಗೂ ಶೇ.100ರಷ್ಟು ಫಲಿತಾಂಶ ಬರಲು ಕ್ರಮ ವಹಿಸಲಾಗಿದೆ ಎಂದು ಡಿಡಿಪಿಐ ಕೊಟ್ರೇಶ್ ಮಾಹಿತಿ ನೀಡಿದರು.

- - -

-21ಕೆಡಿವಿಜಿ39: ದಾವಣಗೆರೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ, ಶೈಕ್ಷಣಿಕ ಕಾರ್ಯಾಗಾರವನ್ನು ಸಂಸದೆ ಡಾ.ಪ್ರಭಾ ಉದ್ಪಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾಗತಿಕ ಸವಾಲಿಗೆ ನವೋದ್ಯಮ ಉತ್ತರ : ರಾಧಾಕೃಷ್ಣನ್‌
ಕಾಮಿಡಿ ಕಿಲಾಡಿಗಳು ಶೋನಲ್ಲಿ ಹಿಂದು ದೇವತೆಗಳ ಬಗ್ಗೆ ಅವಹೇಳನಕ್ಕೆ ‘ಹೈ’ ಕಿಡಿ