ಕನ್ನಡಪ್ರಭ ವಾರ್ತೆ ಮಂಗಳೂರು
ದ.ಕ. ಸಹಕಾರಿ ಹಾಲು ಒಕ್ಕೂಟ ಇದರ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಮಾತನಾಡಿ, ದ.ಕ. ಹಾಲು ಒಕ್ಕೂಟವು ಕರ್ನಾಟಕದಲ್ಲಿ ಮಾದರಿ ಹಾಲು ಒಕ್ಕೂಟವಾಗಿದೆ. ಇದಕ್ಕೆ ಸಿಬ್ಬಂದಿಗಳ ಪಾತ್ರ ಮಹತ್ವದ್ದಾಗಿದೆ. ಅವರಿಗೆ ಸರಿಯಾದ ಮಾಹಿತಿ, ತರಬೇತಿ ನೀಡುವುದರಿಂದ ಇನ್ನೂ ಹೆಚ್ಚಿನ ಹಾಲು ಉತ್ಪಾದನೆಯಾಗಲು ಪರಿಣಾಮ ಬೀಳುತ್ತದೆ ಎಂದು ಹೇಳಿದರು ಅಧ್ಯಕ್ಷತೆ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಹಾಲು ಉತ್ಪಾದನೆ ಹೆಚ್ಚಾಗಲು ಪ್ರತಿ ಗ್ರಾಮಗಳಲ್ಲಿ ಹೈನುಗಾರರಿಗೆ, ರೈತ ಸಮಾವೇಶ ನಡೆಸಿ ಹೈನುಗಾರಿಕೆಯ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸುವ ಕೆಲಸಗಳು ಆಗಬೇಕು. ಸಿಬ್ಬಂದಿ ವರ್ಗದವರು ಪ್ರಸ್ತುತ ಇರುವ ಹೈನುಗಾರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಪರಿಶೀಲಿಸುವ ಪ್ರಯತ್ನ ಮಾಡಬೇಕು ಎಂದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್ ರಮೇಶ್, ಯೂನಿಯನ್ ಉಪಾಧ್ಯಕ್ಷ ನಿಲಯ ಎಂ ಅಗರಿ, ನಿರ್ದೇಶಕರಾದ ಡಾ. ಎಸ್.ಆರ್. ಹರೀಶ್ ಆಚಾರ್ಯ, ಚಿತ್ತರಂಜನ್ ಬೋಳಾರ್, ಸುಧಾಕರ ಶೆಟ್ಟಿ, ಸಂಜೀವ ಪುಜಾರಿ, ಸವಿತಾ ಎನ್. ಶೆಟ್ಟಿ, ದ.ಕ. ಸಹಕಾರಿ ಹಾಲು ಒಕ್ಕೂಟ ಇದರ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ವ್ಯವಸ್ಥಾಪಕ ರವಿರಾಜ್ ಉಡುಪ ಇದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಸಹಕಾರ ಇಲಾಖೆ ಅಧೀಕ್ಷಕ ಎನ್.ಜೆ. ಗೋಪಾಲ್, ಉಪನ್ಯಾಸಕ ಗಣನಾಥ ಶೆಟ್ಟಿ ಎಕ್ಕಾರು ಇವರು ತರಬೇತಿ ನೀಡಿದರು. ಯೂನಿಯನ್ನಿನ್ ನಿರ್ದೇಶಕ ಡಾ. ಎಸ್. ಆರ್. ಹರೀಶ್ ಆಚಾರ್ಯ ಸ್ವಾಗತಿಸಿದರು. ಸವಿತಾ ಎನ್. ಶೆಟ್ಟಿ ವಂದಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ವಿ. ಹಿರೇಮಠ್ ನಿರೂಪಿಸಿದರು.----------------