ಕನ್ನಡಪ್ರಭ ವಾರ್ತೆ ಯಾದಗಿರಿ
ನಗರದ ಎಸ್‌ಡಿಎನ್ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಉದ್ಘಾಟಿಸಿ, ಪಕ್ಷದ ಹಾಗೂ ಸಂಘಟನೆಯ ಹಿರಿಯ ನಾಯಕರ ಎಷ್ಟೋ ವರ್ಷಗಳ ತಪಸ್ಸು, ಕನಸು ನನಸಾಗುತ್ತಿದೆ. ಅಡ್ವಾಣಿಯವರ ರಾಮ ರಾಜ್ಯದ ಮತ್ತು ರಾಮ ಮಂದಿರ ನಿರ್ಮಾಣದ ಕನಸು ಮತ್ತು ಶ್ಯಾಮ ಪ್ರಸಾದ ಮುಖರ್ಜಿಯವರ ಆರ್ಟಿಕಲ್ 370 ರದ್ದು ಇದೆಲ್ಲವುದನ್ನು ನೋಡುವ ಸೌಭಾಗ್ಯ ನಮಗೆ ದೊರೆತಿದೆ ಎಂದರು.
ರಾಜಕೀಯ ಕ್ಷೇತ್ರದಲ್ಲಿ ಕಾರ್ಯಕರ್ತರ ನಡೆ-ನುಡಿ, ನಡವಳಿಕೆಯನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ರಾಜಕಾರಣ ಉತ್ತಮ ದಿಕ್ಕಿನಲ್ಲಿ ಸಾಗುತ್ತಿದೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಕುಟುಂಬಕ್ಕೂ ಸಮಯ ನೀಡಿ, ಹೆಚ್ಚಿನ ಸಮಯವನ್ನು 2-3 ತಿಂಗಳು ಪಕ್ಷದ ಚಟುವಟಿಕೆಗೆ ನೀಡಬೇಕು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಶ್ರಮಿಸಬೇಕು ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಮಾತನಾಡಿ, ಬರುವ ಲೋಕಸಭಾ ಚುನಾವಣೆ ಒಳ್ಳೆ ಕೆಲಸ ಮಾಡುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡೋಣ ಎಂದರು.
ರಾಜ್ಯ ಕಾರ್ಯದರ್ಶಿ ಲಲಿತಾ ಅನಪುರ, ಮಾಜಿ ಶಾಸಕ ಡಾ. ವೀರಬಸವಂತರಡ್ಡಿ ಮುದ್ನಾಳ, ಜಿಲ್ಲಾ ಪ್ರಭಾರಿ ಅಮರನಾಥ ಪಾಟೀಲ್, ವಿಭಾಗ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್, ವಿಭಾಗೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಅರುಣ್ ಬಿನ್ನಾಡಿ, ಸಹ ಕಾರ್ಯದರ್ಶಿ ಸೂರ್ಯಕಾಂತ ದೋನಿ, ಹುಸೇನಬಾಷಾ ಕುರಕುಂದಿ, ಶೋಭಾ ಬಾಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೆವಿಂದ್ರನಾಥ ನಾದ ಇತರರಿದ್ದರು. ವೆಂಕಟರಡ್ಡಿ ಅಬ್ಬೆತುಮಕೂರು ನಿರೂಪಿಸಿದರು. ಗುರು ಕಾಮಾ ಸ್ವಾಗತಿಸಿದರು.