ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಶ್ರಮಿಸಿ: ರೂಪಾಲಿ ನಾಯ್ಕ

KannadaprabhaNewsNetwork |  
Published : Mar 30, 2024 12:55 AM IST
ಸಭೆಯಲ್ಲಿ ಮಾಜಿ ಶಾಸಕಿ ರೂಪಾಲಿ ನಾಯ್ಕ ಮಾತನಾಡಿದರು. | Kannada Prabha

ಸಾರಾಂಶ

ನಾವು ಎಲ್ಲ ಚುನಾವಣೆಗೆ ಸಿದ್ಧರಾಗಿರಬೇಕು. ಬೂತ್‌ ಮಟ್ಟದಲ್ಲಿ ಕಾರ್ಯಕ್ರಮ ನಡೆಸಬೇಕು.

ಕಾರವಾರ: ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ, ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗುವುದಕ್ಕೆ ನಮ್ಮ ಕೊಡುಗೆ ನೀಡೋಣ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಮನವಿ ಮಾಡಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಗರ ಹಾಗೂ ಗ್ರಾಮೀಣ ಮಂಡಲದ ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದರು.

ನಾವು ಎಲ್ಲ ಚುನಾವಣೆಗೆ ಸಿದ್ಧರಾಗಿರಬೇಕು. ಬೂತ್‌ ಮಟ್ಟದಲ್ಲಿ ಕಾರ್ಯಕ್ರಮ ನಡೆಸಬೇಕು. ಕಾರವಾರ- ಅಂಕೋಲಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಹಿಂದಿನ ಚುನಾವಣೆಯಲ್ಲಿ ನೀಡಿ ಗೆಲ್ಲಿಸಲಾಗಿತ್ತು. ಈ ಬಾರಿಯೂ ಅದಕ್ಕೂ ಹೆಚ್ಚು ಮತಗಳನ್ನು ಪಡೆದು ಪಕ್ಷವನ್ನು ಗೆಲ್ಲಿಸಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಶ್ರಮಿಸೋಣ ಎಂದರು. ಪಕ್ಷಕ್ಕೆ ಕಾರ್ಯಕರ್ತರೇ ದೊಡ್ಡ ಶಕ್ತಿ. ಅವರೇ ಜೀವಾಳ. ನಮ್ಮ ಕಾರ್ಯಕರ್ತರು ಮುಂದೆ ಬರಬೇಕು. ಕಾರ್ಯಕರ್ತರೂ ಬೆಳೆಯಬೇಕು. ಪಕ್ಷವೂ ಬೆಳೆಯಬೇಕು. ಪಕ್ಷವನ್ನು ಕಟ್ಟಲು ಹಲವರು ಕೈಜೋಡಿಸಿದ್ದಾರೆ. ಬೂತ್‌ ಸಮಿತಿ ಸರಿಯಾಗಿ ರಚಿಸಬೇಕು. ಸಕ್ರಿಯವಾಗಿ ತೊಡಗಿಕೊಂಡು ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಕಮಲವನ್ನು ಅರಳಿಸಿ, ಉತ್ತರಕನ್ನಡ ಲೋಕಸಭೆ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದರು.

ಪೇಜ್‌ ಪ್ರಮುಖರು, ಬೂತ್‌ ಸಮಿತಿ, ಪಂಚರತ್ನ, ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಸಮಿತಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರದ ಪ್ರಮುಖರನ್ನು ಕರೆಯಲಾಗಿದ್ದು, ಎಲ್ಲರೂ ಆಗಮಿಸಿರುವುದಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ, ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ ಗುನಗಿ, ಸಂಜಯ ಸಾಳುಂಕೆ, ಜಿಲ್ಲಾ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.

PREV