ಅಪೌಷ್ಟಿಕತೆ, ಬಾಲ್ಯವಿವಾಹ ತಡೆಗೆ ಶ್ರಮಿಸಿ: ಜಿಪಂ ಸಿಇಒ ಶಶಿಧರ ಕುರೇರ

KannadaprabhaNewsNetwork |  
Published : Dec 22, 2023, 01:30 AM IST
(ಫೋಟೋ 21ಬಿಕೆಟಿ8, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಇಓ ಕುರೇರ) | Kannada Prabha

ಸಾರಾಂಶ

ಬಾಗಲಕೋಟೆ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಪಂ ಸಿಇಒ ಶಶಿಧರ ಕುರೇರ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಅಪೌಷ್ಟಿಕತೆ ಮತ್ತು ಬಾಲ್ಯವಿವಾಹ ನಿರ್ಮೂಲನೆಗೆ ಅಧಿಕಾರಿಗಳು ಶ್ರಮಿಸಬೇಕೆಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಕುರೇರ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಗನವಾಡಿ ಸೇವೆಗಳನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಿಸಲು ಮತ್ತು ಅಪೌಷ್ಟಿಕತೆ, ಬಾಲ್ಯವಿವಾಹಗಳನ್ನು ತಡೆಗಟ್ಟಲು ಹೆಚ್ಚಿನ ಬದ್ಧತೆಯಿಂದ ಕೆಲಸ ಮಾಡಬೇಕು. ಕರ್ತವ್ಯಲೋಪ ಕಂಡುಬಂದಲ್ಲಿ ಅಂತಹವರ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಗೆ ನೀಡಿದರು.

ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಒಂದು ತಿಂಗಳಲ್ಲಿ ಸರ್ಕಾರಿ ನಿವೇಶನ ಗುರುತಿಸಿ ಹೊಸ ಕಟ್ಟಡ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ ಅವರು, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ನಿಗದಿತ ಮೆನುವಿನಂತೆ ಆಹಾರ, ಆರೋಗ್ಯ ತಪಾಸಣೆ ಮಾಡಿಸಬೇಕು. ಗಂಭೀರ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಪೋಷಕರ ಮನವೊಲಿಸುವ ಕೆಲಸವಾಗಬೇಕು ಎಂದರು.

ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಮತ್ತು ಬಾಲ್ಯವಿವಾಹ ತಡೆಗಟ್ಟಲು ಇತರೆ ಇಲಾಖೆಗಳ ಸಹಯೋಗದೊಂದಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು ಅಂಗನವಾಡಿ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ಭೇಟಿಯ ಸಂದರ್ಭದಲ್ಲಿ ಕೇಂದ್ರದ ಸ್ವಚ್ಛತೆ, ದಾಖಲಾತಿಗಳ ನಿರ್ವಹಣೆ, ಮಕ್ಕಳ ಹಾಜರಾತಿ, ಮಕ್ಕಳ ಸುರಕ್ಷತೆ, ಆಹಾರ ವಿತರಣೆಯ ಬಗ್ಗೆ ಸಮಗ್ರವಾಗಿ ಪರಿಶೀಲನೆ ಮಾಡಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ಕಂಡುಬಂದಲ್ಲಿ ಅಂತಹ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯ ಮೇಲೆ ಶಿಸ್ತು ಕ್ರಮ ಜರುಗಿಸಲು ತಿಳಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಅಮರೇಶ ಎಚ್. ಸೇರಿದಂತೆ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕಿಯರು ಉಪಸ್ಥಿತರಿದ್ದರು.

(ಫೋಟೋ 21ಬಿಕೆಟಿ8, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಇಓ ಕುರೇರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ