ಕನ್ನಡಪ್ರಭ ವಾರ್ತೆ ಗದಗ
ನಗರದ ಡಂಬಳನಾಕಾದಲ್ಲಿನ ಪ್ರಜಾಪೀತ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯದಲ್ಲಿ ಸೋಮವಾರ ಜಿಲ್ಲೆಯ ಪ್ರೌಢಶಾಲೆಗಳ ಎಸ್ಸೆಸ್ಸೆಲ್ಸಿ ಗುಣಾತ್ಮಕ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗಾಗಿ ಜರುಗಿದ ಒಂದು ದಿನದ ವಿಶೇಷ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಂಕಲನಾತ್ಮಕ ಪರೀಕ್ಷೆ-1 ಸಂಬಂಧಿಸಿದ SOP, ಪ್ರತಿ ಮಗುವಿನ ಕಲಿಕೆಯ ಪ್ರಗತಿಯ ದಾಖಲಾತಿ, Mission 60+, ಕಲಿಕಾ ಕೊರತೆ ಹಾಗೂ ಹೆಚ್ಚುವರಿ ಬೆಂಬಲದ ಅಗತ್ಯವಿರುವ ಮಕ್ಕಳಿಗಾಗಿ ವಿಶೇಷ ಕ್ರಮಗಳು, ನಿಧಾನ ಕಲಿಕೆಯ ಮಕ್ಕಳಿಗೆ ಅಗತ್ಯವಾದ ಶೈಕ್ಷಣಿಕ ಬೆಂಬಲ, ಮನೆ ಭೇಟಿ ಮತ್ತು ಓದು ಮನೆ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದರು.ಜಿಲ್ಲೆಯ ಕೆಪಿಎಸ್ ಹಾಗೂ ಪಿ.ಎಂ ಮಾದರಿ ಶಾಲೆಗಳು ಉತ್ತಮ ಕಲಿಕಾ ವಾತಾವರಣ ನಿರ್ಮಿಸಿ ಇತರ ಶಾಲೆಗಳಿಗೆ ಮಾದರಿಯಾಗಬೇಕು. ಶಾಲೆಗಳಲ್ಲಿ ಕೌಶಲ್ಯ ಶಿಕ್ಷಣ, ಮೌಲ್ಯ ಶಿಕ್ಷಣ, ಮಕ್ಕಳ ಸುರಕ್ಷತೆ, ಬಾಲ್ಯ ವಿವಾಹ ತಡೆ, ಫೋಕ್ಸೋ ಕಾಯ್ದೆ, ಮಹಿಳೆಯರಿಗಾಗಿ ದೂರು ನಿವಾರಣಾ ಸಮಿತಿ, ನಶಾಮುಕ್ತ ಶಾಲಾ ವಾತಾವರಣ, KAAMS ಹಾಗೂ ನಿರಂತರ ಹಾಜರಾತಿ ಕುರಿತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್.ಬಿ.ರೆಡ್ಡರ ಅವರು, ಸಂಕಲನಾತ್ಮಕ ಪರೀಕ್ಷೆ -1 ಹಾಗೂ ಅರ್ಧವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದ ಕಾರ್ಯಾಚರಣೆ ಮಾರ್ಗಸೂಚಿ (SOP)ಗಳನ್ನು ಹಾಗೂ PPT ಮೂಲಕ ಪರೀಕ್ಷಾ ಸಿದ್ಧತೆ, ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಮತ್ತು ಫಲಿತಾಂಶ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳನ್ನು ವಿವರಿಸಿದರು.
ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜಯಂತಿ ಅಕ್ಕ ಅವರು, ಮಾನವೀಯ ಮೌಲ್ಯ, ನೈತಿಕ ಮೌಲ್ಯ, ಆಧ್ಯಾತ್ಮಿಕ ಮೌಲ್ಯ ಹಾಗೂ ದೈವೀ ಮೌಲ್ಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.