ಡೆಂಘೀ ನಿಯಂತ್ರಣಕ್ಕೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ-ಜಿಲ್ಲಾಧಿಕಾರಿ

KannadaprabhaNewsNetwork |  
Published : Jun 02, 2025, 12:23 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ ಮಾತನಾಡಿದರು. | Kannada Prabha

ಸಾರಾಂಶ

ಡೆಂಘೀ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಹೇಳಿದರು.

ಗದಗ: ಡೆಂಘೀ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ನಡೆದ ಡೆಂಘೀ ದೈನಂದಿನ ನಿಗಾವಣೆಗಾಗಿ ಅಂತರ್ ಇಲಾಖಾ ಸಮನ್ವಯ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಪಂ ಸಿಇಒ ಭರತ ಎಸ್. ಮಾತನಾಡಿ, ಪ್ರತಿ ವರ್ಷವು ವಾಡಿಕೆಯಂತೆ ಮಳೆಗಾಲ ಪ್ರಾರಂಭವಾಗಿದ್ದು, ಸೊಳ್ಳೆಗಳು ಹೆಚ್ಚಿನ ಪ್ರಮಾಣದಲ್ಲಿ ಉತ್ಪತ್ತಿಗೊಳ್ಳುತ್ತವೆ, ಡೆಂಘೀ ನಿವಾರಣೆ ನಿಟ್ಟಿನಲ್ಲಿ ಸಮುದಾಯ ಪಾತ್ರವು ಮಹತ್ವದಾಗಿದ್ದಾಗಿದೆ ಎಂದರು.

ಜಿಲ್ಲಾ ನೋಡಲ್ ಅಧಿಕಾರಿ ಡಾ. ಶಿವಕುಮಾರ ಕೆ. ಮಾನಕರ್ ಮಾತನಾಡಿ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಲಾರ್ವಾ ಸಮೀಕ್ಷೆ ಕೈಗೊಳ್ಳಲು ಬಂದಾಗ ಸಾರ್ವಜನಿಕರು ಸಹಕರಿಸಬೇಕೆಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಮಾತನಾಡಿ, ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣ ಕೈಗೊಳ್ಳಲು ಗುಣಮಟ್ಟದ ಲಾರ್ವಾ ಸಮೀಕ್ಷೆ ಹಾಗೂ ಜ್ವರ ಸಮೀಕ್ಷೆ ಮಾಡಿ ಖಚಿತ ಪ್ರಕರಣಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಿ, ಸೂಕ್ತ ಆರೈಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಸಹಾಯಕ ಕೀಟಶಾಸ್ತ್ರಜ್ಞರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ರೋಪಸೇನ ಚವಾಣ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!