ಕನ್ನಡಪ್ರಭ ವಾರ್ತೆ ಮಳವಳ್ಳಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ಹಾಗೂ ವಿವ್ಸ್ ಇಂಡಿಯಾ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಪುರುಷರಷ್ಟೇ ಮಹಿಳೆಯರಿಗೂ ಸಮಾನತೆ ಕಲ್ಪಿಸುವ ಮೂಲಕ ಎಲ್ಲ ರೀತಿಯ ಹಕ್ಕು ನೀಡಲಾಗಿದೆ ಎಂದರು.
ಮಹಿಳೆಯರಿಗೆ ಆಸ್ತಿ ಹಕ್ಕು ಸೇರಿದಂತೆ ಎಲ್ಲಾ ಸಮಾನತೆಗಳನ್ನು ಸಂವಿಧಾನದಲ್ಲಿ ನೀಡಲಾಗಿದೆ. ಆದರೆ, ಸಮಾಜದಲ್ಲಿನ ಹಿಂದಿನ ಎಲ್ಲ ಕಟ್ಟು ಪಾಡಿಗಳಿಗೆ ಮಹಿಳೆಯರನ್ನು ಮತ್ತೆ ತೆಗೆದುಕೊಂಡು ಹೋಗುವ ಪ್ರಯತ್ನ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರ ಅನ್ನಭಾಗ್ಯ, ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳ ಮೂಲಕ ಸಮಾಜದಲ್ಲಿ ಮಹಿಳೆಯರನ್ನು ಪ್ರಬಲಗೊಳಿಸುವ ಕೆಲಸ ಮಾಡಲಾಗುತ್ತಿದೆ. ಮಹಿಳೆ ಮನೆ, ಮನೆತನ ಸೇರಿದಂತೆ ಎಲ್ಲವನ್ನು ಯಶಸ್ವಿಯಾಗಿ ನಿಭಾಯಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಸರ್ಕಾರ ನಿಮ್ಮೊಂದಿಗಿದೆ. ಆದರೆ, ಅದನ್ನು ತಿರಸ್ಕಾರ ಮನೋಭಾವನೆಯೊಂದಿಗೆ ಮಾತನಾಡುತ್ತಿರುವವರ ಹೇಳಿಕೆ ರಾಜಕೀಯ ಪ್ರೇರಿತವಾಗಿ ಕೂಡಿವೆ ಎಂದರು.
ವಿವ್ಸ್ ಇಂಡಿಯಾ ಚಾರಿಟಬಲ್ ಟ್ರಸ್ಟ್‌ನ ಮಾದೇಶ್ ಕುಮಾರ್ ಮಾತನಾಡಿ, ಈ ಯೋಜನೆಯ ಮೂಲಕ ತಾಲೂಕಿನ 1500 ಮಂದಿ ತರಬೇತಿ ನೀಡಿ ಬದುಕಿಗೆ ಸ್ಫೂರ್ತಿ ನೀಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಂಜಮಣಿ, ಜಿಪಂ ಎಂಜಿನಿಯರ್ ಅಪ್ಪಯ್ಯ ಬೋವಿ ಪಾಲ್ಗೊಂಡಿದ್ದರು.