ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಅವರು, ನಗರದ ಆದಿನಾಥ ಜೈನ ಭವನದಲ್ಲಿ ತಾಲೂಕು ಮಟ್ಟದ ಮಹಿಳಾ ಸ್ವಸಹಾಯ ಗುಂಪುಗಳ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಈ ಹಿಂದೇ ಕೆಲವು ಪ್ರದೇಶ, ಕೆಲ ವ್ಯಕ್ತಿಗಳಿಗೆ ಮಾತ್ರ ಸೀಮಿತವಾಗಿದ್ದ ಸೇವಾ ಚಟುವಟಿಕೆ, ಇಂದು ನಗರ ಹಾಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಆರ್ಥಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿದೆ ಎಂದು ತಿಳಿಸಿದರು.
ಮಹಿಳಾ ಸ್ವಸಹಾಯಕ ಗುಂಪು ಸೇರಿದಂತೆ ರೈತರು, ಕಾರ್ಮಿಕರು, ಪುರಾತನ ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಸಂಸ್ಥೆ ನೆರವಾಗುತ್ತಿದೆ. ಒಕ್ಕೂಟದ ಪದಾಧಿಕಾರಿಗಳು ಆತ್ಮವಿಶ್ವಾಸದಿಂದ ಸಂಸ್ಥೆಯ ಅಭಿವೃದ್ಧಿಗೆ ದುಡಿಯಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ್ದ ಜಿಲ್ಲಾ ಜನಜಾಗೃತಿ ವೇದಿಕೆ ನಿರ್ದೇಶಕ ಕೆ.ಎಂ. ತಿಪ್ಪೇಸ್ವಾಮಿ ಮಾತನಾಡಿ, ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಿನ ಪುಟ್ಟ ಗ್ರಾಮ, ಪುಟ್ಟ ಓಣಿಯಿಂದ ಹಿಡಿದು ನಗರ ಪ್ರದೇಶದವರೆಗೂ ವಿಸ್ತಾರವಾಗಿದೆ. ಮಹಿಳೆಯನ್ನು ಸ್ವಾವಲಂಭಿಯಾಗಿ ದುಡಿಯುವ ಮಾರ್ಗವನ್ನು ಈ ಸಂಸ್ಥೆ ಕಲ್ಪಿಸಿದೆ. ಒಕ್ಕೂಟದ ಪದಾಧಿಕಾರಿಗಳು ಸಹ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾಗಿ ದುಡಿಯಬೇಕು ಎಂದು ತಿಳಿಸಿದರು.