2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜನಗೂಡು ಕ್ಷೇತ್ರಕ್ಕೆ 25 ಕೋಟಿಗಳ ವಿಶೇಷ ಅನುದಾನವನ್ನು ನೀಡಿದರು
ಕನ್ನಡಪ್ರಭ ವಾರ್ತೆ ನಂಜನಗೂಡು
ಗ್ರಾಮೀಣ ಭಾಗದ ಜನರಿಗೆ ಮೂಲ ಸಕ್ಕರೆಯನ್ನು ಒದಗಿಸುವ ಸಲುವಾಗಿ ತಾಲೂಕಿನ ಗೀಕಹಳ್ಳಿ, ಗೊಣತಗಾಲ, ಹೆಮ್ಮರಗಾಲ, ಭುಜಂಗಯ್ಯನಹುಂಡಿ ಗ್ರಾಮಗಳಲ್ಲಿ 1.93 ಕೋಟಿ ವೆಚ್ಚದ ಸಿಸಿ ಚರಂಡಿ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ತಾಲೂಕಿನ ಗೀಕಹಳ್ಳಿ, ಗೊಣತಗಾಲ, ಹೆಮ್ಮರಗಾಲ, ಭುಜಂಗೈನಹುಂಡಿ ಗ್ರಾಮಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜನಗೂಡು ಕ್ಷೇತ್ರಕ್ಕೆ 25 ಕೋಟಿಗಳ ವಿಶೇಷ ಅನುದಾನವನ್ನು ನೀಡಿದರು. ಈ ಅನುದಾನದಲ್ಲಿ 20 ಕೋಟಿ ರು. ವೆಚ್ಚದಲ್ಲಿ ಸಾಮಾನ್ಯ ವರ್ಗದ ಬೀಜಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯನ್ನು ನೆರವೇರಿಸಲಾಗಿತ್ತು.
ಈ ಕಾಮಗಾರಿಗಳು ಶೀಘ್ರದಲ್ಲೇ ಮುಕ್ತಾಯಗೊಂಡು ಜನರಿಗೆ ಅನುಕೂಲವಾಗಲಿದೆ ಎಂದ ಅವರು, ಒಂದು ವೇಳೆ ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸಿದಲ್ಲಿ ಸಾರ್ವಜನಿಕರು ನಮ್ಮ ಗಮನಕ್ಕೆ ತರಬೇಕು, ಆಗ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಮಹೇಶ್, ಜಿಪಂ ಮಾಜಿ ಸದಸ್ಯೆ ಲತಾಸಿದ್ದಶೆಟ್ಟಿ, ಕಾಂಗ್ರೆಸ್ ಎಸ್ಟಿ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ, ದೊರೆಸ್ವಾಮಿ ನಾಯಕ, ಮುಖಂಡರಾದ ಜಯಮಾಲಾ, ಬೀರೇಗೌಡ, ಹದಿನವಾಳು ಬಸವಣ್ಣ, ವೀರೇಂದ್ರ, ರಾಜಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಮುದ್ದುಮಾದಶೆಟ್ಟಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.