ಕನ್ನಡ ಭಾಷೆಯನ್ನು ಉಳಿಸುವ ಕೆಲಸವಾಗಬೇಕು

KannadaprabhaNewsNetwork |  
Published : Nov 02, 2024, 01:25 AM IST
1ಎಚ್ಎಸ್ಎನ್17 :  | Kannada Prabha

ಸಾರಾಂಶ

ಕನ್ನಡ ಭಾಷೆ ಸಮೃದ್ಧವಾಗಿದ್ದು ಇದನ್ನು ಉಳಿಸುವ ಕಾರ್ಯ ನಡೆಯಬೇಕಿದೆ ಎಂದು ಶಾಸಕ ಎ. ಮಂಜು ತಿಳಿಸಿದರು. ಅರಕಲಗೂಡು ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶುಕ್ರವಾರ ಆಯೋಜಿಸಿದ್ದ 69ನೇ ಕನ್ನಡರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಕನ್ನಡ ಭಾಷೆ ಸಮೃದ್ಧವಾಗಿದ್ದು ಇದನ್ನು ಉಳಿಸುವ ಕಾರ್ಯ ನಡೆಯಬೇಕಿದೆ ಎಂದು ಶಾಸಕ ಎ. ಮಂಜು ತಿಳಿಸಿದರು.

ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶುಕ್ರವಾರ ಆಯೋಜಿಸಿದ್ದ 69ನೇ ಕನ್ನಡರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಕನ್ನಡದಲ್ಲೆ ವ್ಯವಹರಿಸುವಂತೆ ಸೂಚಿಸಿದರು. ತಮ್ಮ ಹುಟ್ಟುಹಬ್ಬದ ಪ್ರಯುಕ್ತ ರೋಟರಿ ಕ್ಲಬ್ ಸಹಯೋಗದಲ್ಲಿ ತಾಲೂಕಿನ 10 ಸಾವಿರ ಪ್ರೌಢಶಾಲಾ ವಿದ್ಯಾರ್ಥಿಗಳ ರಕ್ತದ ಗುಂಪು ಪತ್ತೆಹಚ್ಚಿ ಗುರುತು ಪತ್ರ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.

ಕೊಣನೂರು ಬಿ.ಎಂ. ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮಹೇಶ್ ಕನ್ನಡದ ಭಾಷೆ ಕುರಿತು ಪ್ರಧಾನ ಭಾಷಣ ಮಾಡಿದರು. ತಹಸೀಲ್ದಾರ್ ಕೆ. ಸಿ. ಸೌಮ್ಯ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ವಿವಿಧ ಕ್ಷೇತ್ರಗಳ ಸಾಧಕರಾದ ಶಿಕ್ಷಕ ಯೋಗೇಶ್, ಪ್ರಾಂಶುಪಾಲ ಮಹೇಶ್, ಪೌರಕಾರ್ಮಿಕ ಮಹಿಳೆ ಕಮಲಮ್ಮ, ಸಾಹಿತಿ ರಮೇಶ್ ಭಗವತ್, ಎಸ್‌ಎಸ್‌ಎಲ್‌ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಪೂರ್ಣ ಅಂಕ ಪಡೆದ 30 ವಿದ್ಯಾರ್ಥಿಗಳು ಹಾಗೂ ರಾಜ್ಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಾಲೂಕಿನ 16 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರದೀಪ್ ಕುಮಾರ್, ಉಪಾಧ್ಯಕ್ಷ ಸುಬಾನ್ ಷರೀಫ್‌, ಸದಸ್ಯರಾದ ಹೂವಣ್ಣ, ಕೃಷ್ಣಯ್ಯ, ಅನುಶಾ, ಮುಖಂಡ ವಿ.ಎ. ನಂಜುಂಡಸ್ವಾಮಿ, ನರಸೇಗೌಡ, ಪಪಂ ಮುಖ್ಯಾಧಿಕಾರಿ ಬಸವರಾಜ ಟಾಕಪ್ಪ ಶಿಗ್ಗಾಂವಿ, , ತಾಪಂ ಇಒ ಪ್ರಕಾಶ್, ಬಿಇಒ ಕೆ.ಪಿ.ನಾರಾಯಣ್ ಉಪಸ್ಥಿತರಿದ್ದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ