ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಲು ಕೆಲಸ: ಜಯಣ್ಣ

KannadaprabhaNewsNetwork |  
Published : Nov 01, 2025, 01:45 AM IST
31ಕೆಎಂಎನ್ ಡಿ11 | Kannada Prabha

ಸಾರಾಂಶ

ಜನಪರ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತಷ್ಟು ಶಕ್ತಿ ತುಂಬಲು ಮುಂದಿನ ದಿನಗಳಲ್ಲಿ ಒಗ್ಗಟ್ಟಿನಿಂದ ಶ್ರಮಿಸಲಾಗುವುದು.

ಮಳವಳ್ಳಿ: ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಣ್ಣ ತಿಳಿಸಿದರು. ಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ನಿಷ್ಠೆಯನ್ನು ಗುರುತಿಸಿ ಅಧಿಕಾರ ನೀಡಿದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾಯಕರ ವಿಶ್ವಾಸಕ್ಕೆ ಯಾವುದೇ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುವುದಾಗಿ ಹೇಳಿದರು. ತಾಪಂ ಮಾಜಿ ಸದಸ್ಯ ಶಿವಲಿಂಗಯ್ಯ ಮಾತನಾಡಿ, ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದ ಮುಖಂಡ ಜಯಣ್ಣರಿಗೆ ಜಿಲ್ಲಾ ಉಪಾಧ್ಯಕ್ಷ ಸ್ಥಾನ ನೀಡಿದ ಎಲ್ಲಾ ನಾಯಕರಿಗೆ ಹಿಂದುಳಿದ ಸಮುದಾಯದ ಪರ ಅಭಿನಂದನೆ ಸಲ್ಲಿಸುತ್ತೇವೆ. ಜನಪರ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತಷ್ಟು ಶಕ್ತಿ ತುಂಬಲು ಮುಂದಿನ ದಿನಗಳಲ್ಲಿ ಒಗ್ಗಟ್ಟಿನಿಂದ ಶ್ರಮಿಸಲಾಗುವುದು ಎಂದರು. ಟಿಎಪಿಸಿಎಂಎಸ್ ಅಧ್ಯಕ್ಷ ಲಿಂಗರಾಜು, ಕಾಂಗ್ರೆಸ್ ಕಾರ್ಯಾಧ್ಯಕ್ಷ ಶಿವಮಾದೇಗೌಡ, ಮುಖಂಡರಾದ ಚೌಡಯ್ಯ, ಬಿ.ಎಸ್ ಶಿವಣ್ಣ, ಶಶಿರಾಜ್, ನಾಗೇಂದ್ರ, ಪ್ರಸನ್ನ ಸೇರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ