ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಾಲ ಕಾರ್ಮಿಕ ಪದ್ಧತಿ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಮಕ್ಕಳನ್ನು ದುಡಿಮೆಗೆ ಬಳಸದೆ, ಅವರಿಗೆ ಶಿಕ್ಷಣ ಪಡೆಯಲು ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಅವಕಾಶ ಕಲ್ಪಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೇವಲ ಸರ್ಕಾರದ ಪ್ರಯತ್ನ ಸಾಕಾಗುವುದಿಲ್ಲ. ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ, ಸಂಘ-ಸಂಸ್ಥೆಗಳು, ಉದ್ಯಮಿಗಳು, ಪೋಷಕರು ಹಾಗೂ ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಬೇಕು. ಬಾಲ ಕಾರ್ಮಿಕಕರು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದು, ಮಕ್ಕಳನ್ನು ರಕ್ಷಿಸಿ ಶಿಕ್ಷಣದ ಮುಖ್ಯವಾಹಿನಿಗೆ ತರಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಂದ ದೊರೆಯಬಹುದಾದ ಉಚಿತ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಮಕ್ಕಳು ಬಾಲ್ಯದಲ್ಲಿ ಆಟ, ಪಾಠಗಳಲ್ಲಿ ತೊಡಗಿಕೊಳ್ಳಬೇಕು. ಆ ಬಾಲ್ಯವನ್ನು ಅನುಭವಿಸಲು ಬಿಡೆದೇ ಕೆಲಸಕ್ಕೆ ತೊಡಗಿಸಿಕೊಂಡರೆ ಮಗುವಿನ ಭವಿಷ್ಯ ಹಾಳಾಗುತ್ತದೆ. ಅದಕ್ಕಾಗಿ ಸರ್ಕಾರ ಬಾಲ ಕಾರ್ಮಿಕ ಪದ್ದತಿ ನಿಷೇಧ ಕಾಯ್ದೆ ಜಾರಿಗೆ ತಂದಿದ್ದು, ಬಾಲ ಕಾರ್ಮಿಕ ಕಂಡುಬಂದಲ್ಲಿ ಶಿಕ್ಷೆ ಹಾಗೂ ದಂಡಕ್ಕೆ ಗುರಿಪಡಿಸಲಾಗುತ್ತದೆ. ಕಾಯ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಉದ್ದೇಶದಿಂದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ ರಾಷ್ಟ್ರೀಯ ಯೋಜನಾ ಸಮನ್ವಯಾಧಿಕಾರಿ ರಂಜೀತ ಪ್ರಕಾಶ ತರಬೇತಿ ಕಾರ್ಯಾಗಾರದಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕರ ನಿಷೇಧ ಹಾಗೂ ನಿಯಂತ್ರಣ ಕಾಯ್ದೆ 1986 ತಿದ್ದುಪಡಿ ಕಾಯ್ದೆ 2016ರ ಕುರಿತು ಪ್ರಮುಖ ಅಂಶಗಳು, ಬಾಲ ಕಾರ್ಮಿಕರನ್ನು ಗುರುತಿಸುವುದು, ರಕ್ಷಣೆ ಮತ್ತು ಪುನರ್ವಸತಿ ಕ್ರಮಗಳು, ವಿವಿಧ ಇಲಾಖೆಗಳ ಜವಾಬ್ದಾರಿಗಳು ಹಾಗೂ ಕಾಯ್ದೆಯಡಿ ಕೈಗೊಳ್ಳಬಹುದಾದ ಕಾನೂನು ಕ್ರಮಗಳ ಕುರಿತು ತಜ್ಞರಿಂದ ಮಾಹಿತಿ ನೀಡಿದರು.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಗದ್ದಿ, ಕಾರ್ಯದರ್ಶಿ ಪ್ರಶಾಂತ ನಾರಾಯನಕರ, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ, ತಹಸೀಲ್ದಾರ್ ವಾಸುದೇವ ಸ್ವಾಮಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.