ಪಕ್ಷ ಸಂಘಟಿಸಲು ಒಂದಾಗಿ ಕೆಲಸ ಕೆಲಸ ಮಾಡಿ: ರಾಜ್ಯ ಕಾಂಗ್ರೆಸ್ ಮಹಿಳಾಧ್ಯಕ್ಷೆ ಸೌಮ್ಯರೆಡ್ಡಿ ಕರೆ

KannadaprabhaNewsNetwork |  
Published : Aug 18, 2025, 12:00 AM IST
ರಾಜ್ಯ ಕಾಂಗ್ರೆಸ್ ಮಹಿಳಾಧ್ಯಕ್ಷೆ ಸೌಮ್ಯರೆಡ್ಡಿ ಕರೆ | Kannada Prabha

ಸಾರಾಂಶ

2023ರ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಆರೋಪದಿಂದ ಅಧಿಕಾರ ಕಳೆದುಕೊಂಡಿತು. ನಂತರ ಕಾಂಗ್ರೆಸ್ ಪಕ್ಷಕ್ಕೆ ಎಲ್ಲ ಮಹಿಳೆಯರೇ ಹೆಚ್ಚಿನ ಶಕ್ತಿ ತುಂಬಿ ಅಧಿಕಾರಕ್ಕೆ ತಂದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.

ಕನ್ನಡಪ್ರಭ ವಾರ್ತೆ ಮಂಡ್ಯ

ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಪಕ್ಷ ಸಂಘಟನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ನ ಎಲ್ಲ ಘಟಕಗಳೂ ಒಂದಾಗಿ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ತಿಳಿಸಿದರು.ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ನಡೆದ ನೂತನ ಜಿಲ್ಲಾಧ್ಯಕ್ಷೆ ಎಚ್.ಬಿ.ಶುಭದಾಯಿನಿ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾವು ಯಾವುದೇ ಕೆಲಸಗಳನ್ನು ಸಾಧ್ಯವಾಗಿರಲಿಲ್ಲ. ನಮಗೆ ಅಧಿಕಾರ ಇಲ್ಲದೆ ಸಾಕಷ್ಟು ಸಮಸ್ಯೆಗಳು ಎದುರಾಯಿತು. ಜೊತೆಗೆ ಪಕ್ಷವನ್ನೂ ಸಂಘಟಿಸಲು ಆಗಲಿಲ್ಲ ಎಂದರು.

2023ರ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಆರೋಪದಿಂದ ಅಧಿಕಾರ ಕಳೆದುಕೊಂಡಿತು. ನಂತರ ಕಾಂಗ್ರೆಸ್ ಪಕ್ಷಕ್ಕೆ ಎಲ್ಲ ಮಹಿಳೆಯರೇ ಹೆಚ್ಚಿನ ಶಕ್ತಿ ತುಂಬಿ ಅಧಿಕಾರಕ್ಕೆ ತಂದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು ಎಂದು ವಿವರಿಸಿದರು.

ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಗೆಲುವು ಸಾಧಿಸಲು ಕಾಂಗ್ರೆಸ್‌ನ ಯುವ, ಮಹಿಳಾ ಸೇರಿದಂತೆ ಎಲ್ಲಾ ಘಟಕಗಳೂ ಒಟ್ಟಾಗಿ ಕೆಲಸ ಮಾಡಿ ಪಕ್ಷ ಅಧಿಕಾರದಲ್ಲಿರುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವ ಅಥವಾ ನಂತರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದು, ಇದನ್ನು ಇತಿಹಾಸ ಪುಟಗಳಲ್ಲಿ ನೋಡಬಹುದು. ನೆಹರು ಅವರು17 ವರ್ಷಗಳ ಕಾಲ ರಾಷ್ಟ್ರವನ್ನಾಳಿದರೆ, ಅವರ ಪುತ್ರಿ ಇಂದಿರಾಗಾಂಧಿ ಅವರು 16 ವರ್ಷಗಳ ಕಾಲ ರಾಷ್ಟ್ರವನ್ನು ಮುನ್ನಡೆಸಿ ಬಲಿಷ್ಠ ರಾಷ್ಟ್ರವನ್ನು ಕಟ್ಟಿದರು ಎಂದರು.

ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ ಯಾವುದಾದರೂ ಪಕ್ಷ ಎಂದರೆ ಅದು ಕಾಂಗ್ರೆಸ್‌. ವಿಪಕ್ಷ ನಾಯಕರಾಗಿದ್ದ ವಾಜಪೇಯಿ ಅವರು ಇಂದಿರಾಗಾಂಧಿಯವರ ಆಡಳಿತ ನೋಡಿ ಉಕ್ಕಿನ ಮಹಿಳೆ ಎಂದು ಬಿರುದು ನೀಡಿದ್ದರು. ಮಹಿಳೆಯೊಬ್ಬರನ್ನು ರಾಷ್ಟ್ರಪತಿಯನ್ನಾಗಿ, ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಮೊದಲ ಬಾರಿಗೆ ಮಹಿಳೆಯರನ್ನು ಆಯ್ಕೆ ಮಾಡಿದ್ದೂ ನಮ್ಮ ಕಾಂಗ್ರೆಸ್ ಪಕ್ಷ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಮಹಿಳೆಯರು ನೀಡಿದ ಸಹಕಾರ ಮರೆಯುವಂತಿಲ್ಲ. ಇದೇ ರೀತಿ ಮುಂದೆಯೂ ನಮ್ಮ ಪಕ್ಷದ ಮೇಲೆ ಮಹಿಳೆಯರ ಸಹಕಾರ ಇರಲಿ. ಜೊತೆಗೆ ನಮ್ಮ ಸರ್ಕಾರ ಸಹ ಮಹಿಳೆಯರ ಅಭಿವೃದ್ಧಿಗೆ ಯೋಜನೆ ರೂಪಿಸುತ್ತದೆ ಎಂದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌