ಕನ್ನಡಪ್ರಭ ವಾರ್ತೆ ಶಿರಹಟ್ಟಿ
ತಾಪಂ ಸಭಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಸರ್ಕಾರ ಬಡವರು, ಮಹಿಳೆಯರು, ರೈತರು, ನಿರುದ್ಯೋಗಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬದುಕಿಗೆ ಆಸರೆಯಾಗುವ ಉದ್ದೇಶದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳ ಸದುದ್ದೇಶ ಸಾಕಾರಗೊಳ್ಳಬೇಕಾದರೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸಕಾಲದಲ್ಲಿ ಸೌಲಭ್ಯ ಕಲ್ಪಿಸುವುದು ಅಧಿಕಾರಿಗಳ ಆದ್ಯ ಕರ್ತವ್ಯವಾಗಬೇಕು ಎಂದರು.
ಯಾವುದೇ ಕಾರಣಕ್ಕೂ ಸರ್ಕಾರದ ಸೌಲಭ್ಯಗಳು ಅನರ್ಹರ ಪಾಲಾಗದಂತೆ ಎಚ್ಚರಿಕೆ ವಹಿಸುವುದರ ಜತೆಗೆ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗದಂತೆ ಕಾರ್ಯನಿರ್ವಹಿಸಬೇಕು. ಕೆಲವೆಡೆ ಅರ್ಹತೆ ಇಲ್ಲದವರೂ ಯೋಜನೆಗಳ ಲಾಭ ಪಡೆಯುತ್ತಿರುವ ಸಾಧ್ಯತೆಗಳಿರುವುದರಿಂದ ಫಲಾನುಭವಿಗಳ ಪಟ್ಟಿಯನ್ನು ಕಾಲಕಾಲಕ್ಕೆ ಪರಿಶೀಲಿಸುವ ಅಗತ್ಯವಿದೆ. ಆದಾಯ ತೆರಿಗೆ ಪಾವತಿಸುವವರು, ನಿಯಮಾನುಸಾರ ಅನರ್ಹರಾಗಿರುವವರು ಹಾಗೂ ಮೃತಪಟ್ಟ ಫಲಾನುಭವಿಗಳ ಹೆಸರಿನಲ್ಲಿ ಸೌಲಭ್ಯ ಮುಂದುವರಿಯದಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಪ್ರಜಾಸೇವೆ ಸೇರಿದಂತೆ ತಾಲೂಕಿನಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಕ್ಕೆ ತಮಗೇಕೆ ಆಮಂತ್ರಿಸುವುದಿಲ್ಲ. ಕೇವಲ ಸಮಿತಿಯ ತಾಲೂಕು ಅಧ್ಯಕ್ಷರನ್ನು ಮಾತ್ರ ಆಹ್ವಾನಿಸಿ ನಮ್ಮನ್ನು ಕಡೆಗಣಿಸುವದೇಕೆ? ಕಾರ್ಯಕ್ರಮದಲ್ಲಿ ನಾವು ಪಾಲ್ಗೊಳ್ಳುವುದರಿಂದ ಮಾಹಿತಿ ದೊರೆಯುತ್ತದೆ. ಅದಕ್ಕೆ ಈ ಬಗ್ಗೆ ತಹಸೀಲ್ದಾರ ಗಮನ ಸೆಳೆಯುವಂತೆ ಸಮಿತಿ ಸದಸ್ಯರೆಲ್ಲ ಮಠಪತಿ ಅವರಿಗೆ ತಿಳಿಸಿದರು.