ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಹಕಾರ ಸಂಘಗಳು ಕೃಷಿಕರ ಬೆನ್ನುಲುಬಾಗಿದ್ದು, ಸಹಕಾರ ಸಂಘಗಳನ್ನು ಪ್ರತಿಯೊಬ್ಬರೂ ಬಲಪಡಿಸಲು ಮುಂದಾಗಬೇಕು. ಸಹಕಾರ ಸಂಘಗಳು ಉಳಿದಲ್ಲಿ ಕೃಷಿಕರಿಗೆ ಸಹಕಾರಿಯಾಗಲಿದೆ ಎಂದರು.ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಅವಕಾಶವಿದ್ದು, ಅಗತ್ಯ ಇದ್ದಲ್ಲಿ ಈ ಸಂಬಂಧ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಾಪಿಸಲು ಸೂಕ್ತ ಕ್ರಿಯಾಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಕೊಡಗಿನಂತಹ ಜಿಲ್ಲೆಯಲ್ಲಿ ಕೆಲವೊಂದು ಸಹಕಾರ ಸಂಘಗಳು ನಷ್ಟದಲ್ಲಿ ಇರುವುದು ಬೇಸರದ ಸಂಗತಿ. ಆದ್ದರಿಂದ ನಷ್ಟದಲ್ಲಿರುವ ಸಹಕಾರ ಸಂಘಗಳನ್ನು ಬಲಪಡಿಸಲು ಮುಂದಾಗಬೇಕಿದೆ ಎಂದು ಸಚಿವರು ನಿರ್ದೇಶನ ನೀಡಿದರು.
ಸಹಕಾರ ಸಂಘಗಳು ಕ್ಷೇಮನಿಧಿ ಸೇರಿದಂತೆ ಇತರೆ ಬ್ಯಾಂಕುಗಳಲ್ಲಿ ಠೇವಣಿ ಮಾಡದೆ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಹೂಡಿಕೆ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಸಹಕಾರ ಸಂಘಗಳ ಲೆಕ್ಕಪರಿಶೋಧನೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರಿಗೆ ಸೂಚಿಸಿದರು.
ಹಾಲು ಉತ್ಪಾದಕ ಸಹಕಾರ ಸಂಘಗಳ ಸದಸ್ಯರಿಗೆ ನಿಗದಿತ ದರವನ್ನು ಕಾಲಮಿತಿಯಲ್ಲಿ ಪಾವತಿಸಲು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗದೆ ಇರುವ ಹಾಲು ಉತ್ಪಾದಕರನ್ನು ಸಂಬಂಧಿಸಿದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರನ್ನಾಗಿ ನೊಂದಾಯಿಸಲು ಕ್ರಮವಹಿಸುವಂತೆ ಸಚಿವರು ಸೂಚಿಸಿದರು.
ಕೊಡಗು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಮುಂಡಂಡ ಸಿ. ನಾಣಯ್ಯ, ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಿ.ಎಸ್.ರಮಣ ರೆಡ್ಡಿ, ಬೆಂಗಳೂರು ಅಪೆಕ್ಸ್ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವರಾಜು.ಸಿ.ಎನ್., ಸಹಕಾರ ಸಂಘಗಳ ಅಪರ ನಿಬಂಧಕರಾದ(ಪತ್ರು) ಬಾಲಶೇಖರ್ ಎಚ್., ಕೊಡಗು ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ನಾಯಕ್, ಸಹಕಾರ ಸಂಘಗಳ ಉಪ ನಿಬಂಧಕರಾದ ವಿಜಯಕುಮಾರ್.ಜಿ.ಆರ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕ ಹೇಮಾವತಿ, ಸಹಕಾರ ಸಂಘಗಳ ಉಪ ವಿಭಾಗದ ಸಹಾಯಕ ನಿಬಂಧಕ ಶೈಲಜಾ, ಸಹಕಾರ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಆರ್.ಎಸ್.ರೇಣುಕಾ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಿಇಒ ಯೋಗೇಂದ್ರ ನಾಯಕ್, ಡಿಸಿಸಿ ಬ್ಯಾಂಕಿನ ಮಹಾಪ್ರಬಂಧಕಾದ ಭೋಜಮ್ಮ, ಕೊಡಗು ಕಾಸ್ಕಾರ್ಡ್ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕರು, ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕರು ಇತರರು ಇದ್ದರು.