ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಶ್ರೀನಿವಾಸ್

KannadaprabhaNewsNetwork |  
Published : Oct 14, 2026, 01:15 AM IST
ಗುಬ್ಬಿ ತಾಲ್ಲೂಕಿನ ಹೇರೂರು ಗ್ರಾಮದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಅವರ ಪರ ಪ್ರಚಾರ ಸಭೆ ಉದ್ಘಾಟಿಸಿದ ಶಾಸಕ ಎಸ್.ಆರ್. ಶ್ರೀನಿವಾಸ್ | Kannada Prabha

ಸಾರಾಂಶ

ನಾನು ಈಗಾಗಲೇ ಎರಡು ಬಾರಿ ಕ್ಷೇತ್ರ ಪ್ರವಾಸ ಕೈಗೊಂಡಿದ್ದು, ವಿವಿಧ ಭಾಗಗಳ ಮತದಾರರನ್ನು ಭೇಟಿ ಮಾಡಿದ್ದೇನೆ. ಅನೇಕರು ಯುವ ಅಭ್ಯರ್ಥಿಯ ಅಗತ್ಯ ವ್ಯಕ್ತಪಡಿಸಿದ್ದಾರೆ. ಪದವೀಧರ ಕ್ಷೇತ್ರದಲ್ಲಿ ಪರಿವರ್ತನೆ ತರುವುದರ ಜತೆಗೆ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶ ಹೊಂದಿದ್ದೇನೆ. ಮೊದಲ ಆದ್ಯತೆಯ ಮತ ನೀಡಿ ನನ್ನನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿಸುವ ಮೂಲಕ ಆಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಅವರನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.

ತಾಲೂಕಿನ ಹೇರೂರು ಗ್ರಾಮದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಅವರ ಪರ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿ ನಮ್ಮ ಅಭ್ಯರ್ಥಿ ಗೆಲ್ಲುವುದು ನಿಶ್ಚಿತ ಎಂಬ ವಿಶ್ವಾಸವಿದೆ. ಈ ಹಿಂದೆ ಗೆಲುವು ಸಾಧ್ಯವಾಗಿರಲಿಲ್ಲ. ಆದರೆ, ಈ ಬಾರಿ ಒಂದು ವರ್ಷ ಮುಂಚಿತವಾಗಿಯೇ ಅಭ್ಯರ್ಥಿ ಘೋಷಿಸಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಿದರೆ ಗೆಲುವು ಸುಲಭ ಎಂದು ತಿಳಿಸಿದರು. ಈಗಾಗಲೇ ಹಲವು ಚುನಾವಣೆಗಳಲ್ಲಿ ಅನುಭವ ಹೊಂದಿರುವ ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಯಾವುದೇ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪದವೀಧರ ಮತದಾರರನ್ನು ಪ್ರೇರೇಪಿಸಿ ಅಭ್ಯರ್ಥಿಯ ಗೆಲುವಿಗೆ ಸಹಕರಿಸಬೇಕು ಎಂದು ಕರೆ ನೀಡಿದರು.ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಈ ಹಿಂದೆ ಹಲವು ಬಾರಿ ಗೆಲುವು ಸಾಧಿಸಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಮತದಾರರು ಪ್ರಶ್ನಿಸಬೇಕು. ಯುವಕರು, ಶಿಕ್ಷಕರು ಮತ್ತು ಪದವೀಧರರು ಹಿಂದಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಮತ ಚಲಾಯಿಸಬೇಕು. ಕ್ಷೇತ್ರದಲ್ಲಿ ಬದಲಾವಣೆ ತರಲು ಯುವ ಅಭ್ಯರ್ಥಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.ನಾನು ಈಗಾಗಲೇ ಎರಡು ಬಾರಿ ಕ್ಷೇತ್ರ ಪ್ರವಾಸ ಕೈಗೊಂಡಿದ್ದು, ವಿವಿಧ ಭಾಗಗಳ ಮತದಾರರನ್ನು ಭೇಟಿ ಮಾಡಿದ್ದೇನೆ. ಅನೇಕರು ಯುವ ಅಭ್ಯರ್ಥಿಯ ಅಗತ್ಯ ವ್ಯಕ್ತಪಡಿಸಿದ್ದಾರೆ. ಪದವೀಧರ ಕ್ಷೇತ್ರದಲ್ಲಿ ಪರಿವರ್ತನೆ ತರುವುದರ ಜತೆಗೆ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶ ಹೊಂದಿದ್ದೇನೆ. ಮೊದಲ ಆದ್ಯತೆಯ ಮತ ನೀಡಿ ನನ್ನನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್, ತಾಲೂಕು ಅಧ್ಯಕ್ಷ ಕೆ.ಆರ್. ವೆಂಕಟೇಶ್, ಗುರುರೇಣುಕಾರಾಧ್ಯ, ಕೆ.ಆರ್. ತಾತಯ್ಯ, ದಾಸಪ್ಪ, ಸಣ್ಣರಂಗಯ್ಯ, ಶಂಕರಾನಂದ್, ನರಸಿಂಹಯ್ಯ, ಮಂಜುನಾಥ್, ದಯಾನಂದ, ಶಶಿ, ಸಲೀಂ, ಅಶೋಕ್, ಚಿಕ್ಕರಂಗಣ್ಣ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರು, ಶಿಕ್ಷಕರು, ಪದವೀಧರರು ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ.ಬಿಮೋಲ್ ವಿರುದ್ಧ ಬಿಜೆಪಿ ಹೋರಾಟ
ಎನ್‌ಡಿಎ ಅಭ್ಯರ್ಥಿ ರಂಗನಾಥ್ ಬೆಂಬಲಿಸಲು ಇ.ಕೃಷ್ಣಪ್ಪ ಕರೆ