ಹುಬ್ಬಳ್ಳಿ:
ಇಲ್ಲಿನ ಲ್ಯಾಮಿಂಗ್ಟನ್ ಶಾಲೆ ಎದುರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಮೋಹನ ಲಿಂಬಿಕಾಯಿ ಅವರನ್ನು ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಹಲವು ವರ್ಷಗಳ ಹಿಂದೆ ಕಾಂಗ್ರೆಸ್‌ನ ತೆಕ್ಕೆಯಲ್ಲಿದ್ದ ಕ್ಷೇತ್ರವನ್ನು ಮತ್ತೆ ಪಕ್ಷದ ವಶಕ್ಕೆ ಪಡೆಯುವ ಮೂಲಕ ಕಾಂಗ್ರೆಸ್‌ನ ಸಂಘಟನಾ ಶಕ್ತಿ ಪ್ರದರ್ಶಿಸಬೇಕು ಎಂದರು.ವಿಪ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಮಾತನಾಡಿ, ಎಚ್.ಕೆ. ಪಾಟೀಲ ಅವರು 4 ಬಾರಿ ಸತತವಾಗಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅವರನ್ನು ಸೋಲಿಸಿದ್ದ ಮೋಹನ ಲಿಂಬಿಕಾಯಿ ಇದೀಗ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಪದವೀಧರ ಮತದಾರರ ಪೈಕಿ ಶೇ. 50ರಷ್ಟು ಮಂದಿ ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿದ್ದಾರೆ. ಹೀಗಾಗಿ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದರು.
ಅಂಜುಮನ್ -ಎ-ಇಸ್ಲಾಂ ಸಂಸ್ಥೆ ಅಧ್ಯಕ್ಷ ಎ.ಎಂ. ಹಿಂಡಸಗೇರಿ, ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಜುಟ್ಟಲ್, ಮಾಜಿ ಸಂಸದ ಪ್ರೊ. ಐ.ಜಿ. ಸನದಿ, ಮುಖಂಡರಾದ ಎಂ.ಎಸ್. ಅಕ್ಕಿ, ಸತೀಶ ಮೆಹರವಾಡೆ, ಶಿವಕುಮಾರ ರಾಯನಗೌಡ್ರು, ಅನಿಲಕುಮಾರ ಪಾಟೀಲ, ಪ್ರೇಮನಾಥ ಚಿಕ್ಕತುಂಬಳ ಸೇರಿದಂತೆ ಹಲವರಿದ್ದರು.