ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲೆಯ ಮುದ್ದೇಬಿಹಾಳ ತಾಪಂ ಸಭಾಂಗಣದಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕುಗಳ ಮಹಾತ್ಮ ಗಾಂಧಿ ನರೇಗಾ ಯೋಜನೆ, ಗ್ರಾಮ ಪಂಚಾಯತಿ ತೆರಿಗೆ, ಗ್ರಂಥಾಲಯ, ತೆರಿಗೆ ವಸೂಲಾತಿ, ವಸತಿ, ಎಸ್.ಬಿ.ಎಂ. ಅನುದಾನ ಪಾವತಿ, ಇ-ಹಾಜರಾತಿ, ಮಹಿಳಾ ಗ್ರಾಮಸಭೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ತೆರಳಿ, ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲಹೆ ನೀಡಿದರು.
ಎರಡು ತಾಲೂಕಿಗೆ ನಿಗದಿಪಡಿಸಿರುವ ಮಾನವ ದಿನಗಳನ್ನು ಮೇ ತಿಂಗಳ ಅಂತ್ಯದಲ್ಲಿ ಪೂರ್ಣಗೊಳಿಸಬೇಕು. ಪ್ರಸ್ತುತ ಹಾಗೂ ಬಾಕಿ ಉಳಿದ ನರೇಗಾ ಕೂಲಿಕಾರರ ಕೂಲಿಯನ್ನು ಸಕಾಲದಲ್ಲಿ ಪಾವತಿಸಬೇಕು. ಎಲ್ಲಾ ನರೇಗಾ ಕೂಲಿಕಾರರ ಇಕೆವೈಸಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದರು. ನರೇಗಾ ಯೋಜನೆಯಡಿ ಅಪೂರ್ಣಗೊಂಡ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ನಮೂನೆ-6ರಲ್ಲಿ ಬೇಡಿಕೆ ಸಲ್ಲಿಸಿದ ಎಲ್ಲಾ ಕೂಲಿಕಾರರಿಗೆ ಉದ್ಯೋಗ ಒದಗಿಸಬೇಕು. ವಿವಿಧ ಯೋಜನೆಗಳಲ್ಲಿ ನಿಗದಿತ ಪ್ರಗತಿ ಕುಂಠಿತಗೊಂಡಿರುವುದನ್ನು ಉಲ್ಲೇಖಿಸಿ ತ್ವರಿತವಾಗಿ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಜಿಪಂ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಮುದ್ದೇಬಿಹಾಳ ತಾಪಂ ಇಒ ಸಂಗನಗೌಡ, ತಾಳಿಕೋಟಿ, ತಾಪಂ ಇಒ ಅನುಸೂಯ ಚಲವಾದಿ ವೇದಿಕೆಯಲ್ಲಿದ್ದರು.