ಕನ್ನಡಪ್ರಭ ವಾರ್ತೆ ಚಾಮರಾಜನಗರ
ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ತಡೆಯಲು ಎಲ್ಲರೂ ಕಾರ್ಯ ಪ್ರವೃತ್ತರಾಗಬೇಕು. ಮಕ್ಕಳನ್ನು ನಮ್ಮ ಮಕ್ಕಳಂತೆ ನೋಡಿಕೊಂಡರೆ ಮಾತ್ರ ದೌರ್ಜನ್ಯಕ್ಕೆ ಒಳಗಾಗುವ ಮಗುವಿಗೆ ನ್ಯಾಯ ಒದಗಿಸಲು ಸಾಧ್ಯ. ಮಕ್ಕಳ ಶಿಕ್ಷಣ, ರಕ್ಷಣೆ, ಪೋಷಣೆ, ಆರೋಗ್ಯದ ವೃದ್ಧಿಗೆ ಮೊದಲ ಆದ್ಯತೆ ನೀಡಬೇಕು ಎಂದರು.
ಮಕ್ಕಳ ಹಕ್ಕುಗಳ ಒಡಂಬಡಿಕೆ 1989ರಲ್ಲಿ ಜಾರಿಯಾದಾಗಿನಿಂದ 6 ಬಾರಿ ನಮ್ಮ ದೇಶದಿಂದ ಮಕ್ಕಳ ಹಕ್ಕುಗಳ ಬಗೆಗಿನ ವರದಿಯನ್ನು ವಿಶ್ವಸಂಸ್ಥೆಗೆ ನೀಡಲಾಗಿದೆ. ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹದಿಂದ ಹದಿಹರೆಯದ ವಯಸ್ಸಿನಲ್ಲಿಯೇ ಮಕ್ಕಳು ತಾಯಂದಿರಾಗುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಇದನ್ನು ತಡೆಯಲು ವಿವಿಧ ಇಲಾಖೆಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ತಿಳಿಸಿದರು.ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್.ಚಿದಂಬರ ಅವರು, ಸಮಾಜದ ಸುಸ್ಥಿರ ಬೆಳವಣಿಗೆಗೆ ಸರ್ಕಾರದ ಕಾನೂನುಗಳ ಬಗ್ಗೆ ತಿಳಿದುಕೊಂಡು ಅದನ್ನು ಕಾರ್ಯರೂಪಕ್ಕೆ ತರಬೇಕು. ಬಾಲ್ಯವಿವಾಹಗಳಿಗೆ ಕಡಿವಾಣ ಹಾಕಬೇಕು. ಮಕ್ಕಳು ಶಾಲೆ ಬಿಡದ ರೀತಿ ನೋಡಿಕೊಳ್ಳಬೇಕು. ಮಕ್ಕಳು ವಿದ್ಯಾವಂತರಾದರೆ ಬಾಲ್ಯ ವಿವಾಹ ಕಡಿಮೆಯಾಗುತ್ತದೆ. ಪೋಕ್ಸೋ ಕಾಯ್ದೆ ಬಗ್ಗೆ ಪೋಷಕರಿಗೆ ಅರಿವು ಮೂಡಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಂಜುನಾಥ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ.ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎನ್.ಚಲುವರಾಜ್, ಡಾ.ಅಂಕಪ್ಪ ಇತರರು ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.