ಸೇವೆಯನ್ನೇ ತನ್ನ ಧ್ಯೇಯವನ್ನಾಗಿಸಿಕೊಂಡು ಕೆಲಸ: ಕೆ. ಪುಷ್ಪರಾಜ್

KannadaprabhaNewsNetwork | Published : Jul 23, 2024 12:34 AM

ಸಾರಾಂಶ

ಚಿಕ್ಕಮಗಳೂರು, ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ರೋಗಿಗಳಿಗೆ ಲಯನ್ಸ್ ಕ್ಲಬ್ ನಿಂದ ಉಚಿತ ಕನ್ನಡಕಗಳನ್ನು ವಿತರಿಸಲಾಗುವುದೆಂದು ಲಯನ್ಸ್ ಕ್ಲಬ್ ಅಧ್ಯಕ್ಷ ಕೆ. ಪುಷ್ಪರಾಜ್ ಹೇಳಿದ್ದಾರೆ.

ಕಳಸಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ರೋಗಿಗಳಿಗೆ ಲಯನ್ಸ್ ಕ್ಲಬ್ ನಿಂದ ಉಚಿತ ಕನ್ನಡಕಗಳನ್ನು ವಿತರಿಸಲಾಗುವುದೆಂದು ಲಯನ್ಸ್ ಕ್ಲಬ್ ಅಧ್ಯಕ್ಷ ಕೆ. ಪುಷ್ಪರಾಜ್ ಹೇಳಿದ್ದಾರೆ. ಚಿಕ್ಕಮಗಳೂರು ಲಯನ್ಸ್ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಘಟಕ, ಜಿಲ್ಲಾ ಸಂಚಾರಿ ನೇತ್ರ ಘಟಕದ ಆಶ್ರಯದಲ್ಲಿ ತಾಲೂಕಿನ ಕಳಸಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸೇವೆಯನ್ನೇ ತನ್ನ ಧ್ಯೇಯವನ್ನಾಗಿಸಿಕೊಂಡು ಕೆಲಸ ಮಾಡುತ್ತಿರುವ ಲಯನ್ಸ್ ಸಂಸ್ಥೆ ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯ ಕ್ರಮಗಳಿಗೆ ಆದ್ಯತೆ ನೀಡಿದ್ದು, ಆರೋಗ್ಯ ಇಲಾಖೆ ಕೈಗೊಳ್ಳಲಿರುವ ಎಲ್ಲಾ ಸೇವಾ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದ ಬಡವರಿಗೆ ಆರೋಗ್ಯ ಸೇವೆ ತಲುಪಿಸಬೇಕೆಂಬುದು ಉದ್ದೇಶವಾಗಿದ್ದು, ಈ ಸಂಬಂಧ ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚು ಆರೋಗ್ಯ ಕಾರ್ಯಕ್ರಮಗಳನ್ನು ಲಯನ್ಸ್ ಸಂಸ್ಥೆ ಹಮ್ಮಿಕೊಳ್ಳುತ್ತಿದೆ. ಸಾರ್ವಜನಿಕರು ಇದರ ಸದುಪ ಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ನೇತ್ರ ತಜ್ಞ ಡಾ. ಸಖರಾಂ ಶೆಟ್ಟಿ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಜನರಲ್ಲಿ ಪೌಷ್ಠಿಕ ಆಹಾರ ಸೇವನೆ ಕೊರತೆ ಯಿಂದಾಗಿ ಕಣ್ಣಿನಲ್ಲಿ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು, ಇದನ್ನು ಪ್ರಾರಂಭಿಕ ಹಂತದಲ್ಲೇ ಸೂಕ್ತ ಶಸ್ತ್ರ ಚಿಕಿತ್ಸೆ ಮೂಲಕ ಪರಿಹರಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ಕಳಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಾರ್ತಿಕ್ ಮಾತನಾಡಿ, ಆರೋಗ್ಯ ಇಲಾಖೆ ಸಹಕಾರದೊಂದಿಗೆ ಚಿಕ್ಕಮಗಳೂರು ಲಯನ್ಸ್ ಕ್ಲಬ್ ಉಚಿತ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಕಣ್ಣಿನ ಸಮಸ್ಯೆ ಇರುವವರು ಈ ಶಿಬಿರದ ಪ್ರಯೋಜನ ಪಡೆಯಬೇಕೆಂದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ಗೋಪಿಕೃಷ್ಣ ಮಾತನಾಡಿ, ಗ್ರಾಮೀಣ ಪ್ರದೇಶದ ಬಡಜನರಿಗೆ ಆರೊಗ್ಯ ಸೌಲಭ್ಯ ತಲುಪಿಸ ಬೇಕೆಂಬ ದೃಷ್ಠಿಯಿಂದ ಕಳಸಾಪುರ ಗ್ರಾಮದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಕಣ್ಣಿನ ಪೊರೆ ಸೇರಿ ದಂತೆ ಇನ್ನಿತರೆ ಸಮಸ್ಯೆ ಇರುವವರಿಗೆ ಈ ಶಿಬಿರದಲ್ಲಿ ತಪಾಸಣೆಗೊಳಪಡಿಸಿ ಅಗತ್ಯವಿದ್ದವರಿಗೆ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಶಸ್ತ್ರ ಚಿಕಿತ್ಸೆ ಮಾಡಿಸಲಾಗುವುದೆಂದು ತಿಳಿಸಿದರು.ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ ಮಾತನಾಡಿ, ನೇತ್ರ ತಪಾಸಣೆ ಜೊತೆಗೆ ವ್ಯಾಪಕವಾಗಿ ಹರಡುತ್ತಿರುವ ಡೆಂಘೀ ನಿಯಂತ್ರಣದ ಬಗ್ಗೆಯೂ ಜನಜಾಗೃತರಾಗಬೇಕು, ಇದರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಸಾರ್ವ ಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದರು. ಲಯನ್ಸ್ ಕ್ಲಬ್ ಖಜಾಂಚಿ ಗಿರೀಶ್, ನೇತ್ರ ತಪಾಸಣಾ ಶಿಬಿರದ ಸಂಯೋಜನಾಧಿಕಾರಿ ಎಸ್.ಆರ್. ವೈದ್ಯ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬೇಬಿ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆ ಅಮೃತ ಮತ್ತು ಜಯಂತಿ ನೇತ್ರ ತಪಾಸಣೆ ನಡೆಸಿಕೊಟ್ಟರು. ಮಂಜುಳ ಸ್ವಾಗತಿಸಿ, ಕಲಾಧರೆ ವಂದಿಸಿದರು.21 ಕೆಸಿಕೆಎಂ 8ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಲಯನ್ಸ್‌ ಕ್ಲಬ್ ಅಧ್ಯಕ್ಷ ಪುಷ್ಪರಾಜ್‌, ನೇತ್ರ ತಜ್ಞ ಡಾ. ಸಖರಾಂ ಶೆಟ್ಟಿ, ಡಾ. ಕಾರ್ತೀಕ್‌, ಜಲಜಾಕ್ಷಿ, ಎಸ್‌.ಆರ್‌. ವೈದ್ಯ ಇದ್ದರು.

Share this article