ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಮೆರಿಕ, ಲಂಡನ್ ಸೇರಿದಂತೆ ವಿದೇಶದಲ್ಲಿ ವ್ಯಾಸಂಗ ಮಾಡಿದವರು ವಾಪಸ್ಸು ದೇಶಕ್ಕೆ ಆಗಮಿಸುವುದು ಕಡಿಮೆ, ಆದರೆ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿದೇಶದಲ್ಲಿ ಅಧ್ಯಯನ ಮಾಡಿ ರಾಷ್ಟ್ರಕ್ಕೆ ದೇವರಂತೆ ಆಗಮಿಸಿ ಸಂವಿಧಾನ ರಚಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆಗೆ ಹಗಲಿರುಳು ಶ್ರದ್ಧೆ ವಹಿಸಿ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದಾರೆ ಎಂದು ಹೇಳಿದರು.ಶಿಕ್ಷಣದಿಂದ ರಾಷ್ಟ್ರದಲ್ಲಿ ಬದಲಾವಣೆ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಶಿಕ್ಷಣದಿಂದ ಮಾತ್ರ ರಾಷ್ಟ್ರದಲ್ಲಿ ಬದಲಾವಣೆ ತರಲು ಸಾಧ್ಯ ಎಂಬುದನ್ನು ಸಾರಿದ್ದರು, ಅಂಬೇಡ್ಕರ್ ಅವರ ಆಶಯದಂತೆ ಪ್ರತಿಯೊಬ್ಬರೂ ನಡೆದುಕೊಳ್ಳಬೇಕು ಎಂದು ಶಾಸಕರು ವಿವರಿಸಿದರು.
ಬಾಬಾ ಸಾಹೇಬರು ವಾಸ ಮಾಡುತ್ತಿದ್ದ ಪ್ರತಿ ಕೊಠಡಿಯಲ್ಲಿಯೂ ಶೇ.90 ರಷ್ಟು ಪುಸ್ತಕಗಳು ಇರುತ್ತಿದ್ದವು, ಅಷ್ಟರ ಮಟ್ಟಿಗೆ ಅಧ್ಯಯನದಲ್ಲಿ ತೊಡಗಿಕೊಳ್ಳುತ್ತಿದ್ದರು ಎಂದು ಹೇಳಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ಸಾಕ್ಷರತೆ ಪ್ರಮಾಣವು ಶೇ.5.30 ರಷ್ಟು ಇತ್ತು, ಇಂದು ಶೇ.75 ರಷ್ಟು ಸಾಕ್ಷರತೆ ಪಡೆಯಲು ಅಂಬೇಡ್ಕರ್ ಅವರು ಬರೆದ ಸಂವಿಧಾನವೇ ಕಾರಣ ಎಂದರು.
ನಮ್ಮ ಜನ ಕಾನೂನು ಪಂಡಿತರಾಗಬೇಕು. ದೊಡ್ಡ ಆರ್ಥಿಕ ತಜ್ಞರಾಗಬೇಕು. ಐಐಟಿ, ಐಐಎಂ ಗಳಲ್ಲಿ ಅಧ್ಯಯನ ಮಾಡಬೇಕು ಎಂಬ ಕನಸು ಕಂಡಿದ್ದರು ಎಂದು ಶಿವಕುಮಾರ್ ಅವರು ಹೇಳಿದರು.
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು, ಅಂತರ ಜಾತಿ ವಿವಾಹಿತರಿಗೆ ಮತ್ತು ಪರಿಶಿಷ್ಟ ಜಾತಿ ಒಳಪಂಗಡದಲ್ಲಿ ವಿವಾಹಿತರಿಗೆ ಸಹಾಯಧನದ ಚೆಕ್ ವಿತರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಡಿಎಸ್ಎಸ್ ಜಿಲ್ಲಾ ಸಂಚಾಲಕರಾದ ದಿವಾಕರ, ದೌರ್ಜನ್ಯ ನಿವಾರಣೆ ಸಮಿತಿ ಸದಸ್ಯರಾದ ಜನಾರ್ಧನ, ನಗರಸಭೆ ಸದಸ್ಯರಾದ ಅನಿತಾ ಪೂವಯ್ಯ, ಸತೀಶ್, ಸಬಿತಾ, ಕಲಾವತಿ, ಪ್ರಮುಖರಾದ ಟಿ.ಪಿ.ರಮೇಶ್, ಪ್ರೇಮ ಕೃಷ್ಣಪ್ಪ, ಮೋಹನ್ ಮೌರ್ಯ, ಪ್ರೇಮ್ ಕುಮಾರ್, ದೀಪಕ್ ಪೊನ್ನಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಅರುಣ್ ಕುಮಾರ್, ಪಾಲಾಕ್ಷ, ವಿರೇಂದ್ರ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಇದ್ದರು.
ನಗರದ ಕಾವೇರಿ ಕಲಾಕ್ಷೇತ್ರದಿಂದ ಗಾಂಧಿ ಭವನದ ವರೆಗೆ ವಿವಿಧ ಕಲಾತಂಡ ಹಾಗೂ ವಿದ್ಯಾರ್ಥಿಗಳೊಂದಿಗೆ ಮೆರವಣಿಗೆ ನಡೆಯಿತು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.ಡೊಳ್ಳು ಕುಣಿತ, ವೀರಗಾಸೆ ಕುಣಿತವು ಮೆರವಣಿಗೆಯಲ್ಲಿ ಮೆರಗು ತಂದವು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.