)
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಗಳವಾರ ರಾತ್ರಿ 8.30ರ ಸುಮಾರಿಗೆ ಮದುವೆ ಆರತಕ್ಷತೆ ಮುಗಿಸಿಕೊಂಡು ತಮ್ಮ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿರುವಾಗ ಚಿಕ್ಕಜಾಲ ಜಂಕ್ಷನ್ ಬಳಿ ವೇಗವಾಗಿ ಬಂದ ಆಡಿ ಕಾರು ಬೈಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಸವಾರ ಮಹೇಶ್ ಕುಮಾರ್, ಹಿಂಬದಿ ಸವಾರರಾದ ಕಲಾ ಮತ್ತು ಮಗಳು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಯ ದಾರಿ ಮಧ್ಯದಲ್ಲಿಯೇ ಮಹೇಶ್ ಕುಮಾರ್ ಮೃತಪಟ್ಟಿದ್ದಾರೆ.
ಅಪಘಾತದ ನಂತರ ಕಾರಿನ ಚಾಲಕ ವಾಹನ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಸ್ಥಳೀಯ ಸಿಸಿ ಕ್ಯಾಮೆರಾಗಳ ದೃಶ್ಯ ಪರಿಶೀಲನೆ ನಡೆಸಲಾಗಿದೆ. ಕಾರಿನ ನೋಂದಣಿ ಸಂಖ್ಯೆ ಆಧರಿಸಿ ಕಾರಿನ ಚಾಲಕನ ಪತ್ತೆ ಕಾರ್ಯ ಮುಂದುವರಿದಿದೆ. ಘಟನೆ ಸಂಬಂಧ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅತ್ತೆ ಮನೆಗೋಗಿ ವಾಪಸ್
ಮತ್ತೊಂದು ಪ್ರಕರಣದಲ್ಲಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿಲೇರಿ ಗ್ರಾಮದ ನಿವಾಸಿ, ಚಾಲಕ ಶೇಖರ್ (28) ಮೃತಪಟ್ಟವರು. ಈ ಸಂಬಂಧ ವಿನಯ್ ಕುಮಾರ್ ಎಂಬುವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ ಮುರಳೀಧರನ್ ಸಿದ್ದಾರ್ಥ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಶೇಖರ್ ಅವರು ದೇವನಹಳ್ಳಿಯಲ್ಲಿರುವ ತಮ್ಮ ಅತ್ತೆ ಮನೆಗೆ ಹೋಗಿ ಅವರ ಮನೆಗೆ ಹಿಂದಿರುಗುವಾಗ ದೇವನಹಳ್ಳಿಯ ಕೋಟೆ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ 10.30 ರ ಸುಮಾರಿಗೆ ವೇಗವಾಗಿ ಬಂದ ಕಾರು ಹಿಂದಿನಿಂದ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದ ಶೇಖರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕಾರನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ.