ಪೆಂಡಾಲ್‌ ಹಾಕುತ್ತಿದ್ದಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕ ಸಾವು

KannadaprabhaNewsNetwork |  
Published : Jul 21, 2024, 01:26 AM IST
ಪೆಂಡಾಲ್‌ ಹಾಕುತ್ತಿದ್ದ ವೇಳೆ ವಿದ್ಯುತ್‌ ಪ್ರವಹಿಸಿ ಕಾರ್ಮಿಕ ಸಾವು | Kannada Prabha

ಸಾರಾಂಶ

ಕಲ್ಲಡ್ಕದ ಶಾಮಿಯಾನ್ ಸರ್ವಿಸಸ್‌ನ ಐವರು ಕಾರ್ಮಿಕರು ಕೆಲಸ‌ ಮಾಡುತ್ತಿದ್ದರು. ಘಟನೆ ಸಂದರ್ಭ ಏಣಿ ಹೈಟೆನ್ಶನ್ ವಿದ್ಯುತ್ ತಂತಿಗೆ ತಗಲಿ ಈ‌ ಅವಘಡ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಖಾಸಗಿ ಸ್ಥಳವೊಂದರಲ್ಲಿ ಪೆಂಡಾಲ್ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ಹೈಟೆನ್ಶನ್‌ ವಿದ್ಯುತ್ ತಂತಿಗೆ ಸ್ಪರ್ಶಿಸಿ ಬಿಹಾರ ಮೂಲದ ಕಾರ್ಮಿಕ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (19) ಮೃತ ಕಾರ್ಮಿಕ. ಕಡೇಶ್ವಾಲ್ಯ ಗ್ರಾಮದ ಪ್ರಸನ್ನ, ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಎಂಬವರು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ವಿವರ: ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಹೈಟೆಕ್ ಕೋಳಿ ಅಂಕ ನಡೆಸುವ ಉದ್ದೇಶದಿಂದ ಪೆಂಡಾಲ್ ಹಾಕುತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಲ್ಲಡ್ಕದ ಶಾಮಿಯಾನ್ ಸರ್ವಿಸಸ್‌ನ ಐವರು ಕಾರ್ಮಿಕರು ಕೆಲಸ‌ ಮಾಡುತ್ತಿದ್ದರು. ಘಟನೆ ಸಂದರ್ಭ ಏಣಿ ಹೈಟೆನ್ಶನ್ ವಿದ್ಯುತ್ ತಂತಿಗೆ ತಗಲಿ ಈ‌ ಅವಘಡ ಸಂಭವಿಸಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಶರೀರವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿ ಹರೀಶ್, ಗ್ರಾಮ ಕರಣಿಕ ಕರಿಬಸಪ್ಪ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು.ಬೈಕ್‌ಗಳ ನಡುವೆ ಡಿಕ್ಕಿ: ಓರ್ವ ಸಾವು, ನಾಲ್ವರು ಗಂಭೀರ ಗಾಯ

ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ತುರ್ಕಳಿಕೆ ಎಂಬಲ್ಲಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸವಾರ ಶಿವಾನಂದ (೧೯) ಎಂಬವರು ಮೃತಪಟ್ಟಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.ಬಾರ್ಯ ಪರಿಸರದ ನಿವಾಸಿಗರಾದ ಶಿವಾನಂದ ಮತ್ತವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿನ ತನ್ನ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಎದುರುಗಡೆಯಿಂದ ಬಂದ ಕರೀಂ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆಯಿತು. ರಸ್ತೆಗೆ ಎಸೆಯಲ್ಪಟ್ಟ ಶಿವಾನಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅಸುನೀಗಿದರು. ಘಟನೆಯಿಂದ ಧನಂಜಯ, ರವಿ, ಆಸ್ಮಾನ್‌ ಹಾಗೂ ಕರೀಂ ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ