ದಾಬಸ್‍ಪೇಟೆ: ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುವಾಗ ಕಾರ್ಮಿಕನೊಬ್ಬ ಜಾರಿಬಿದ್ದು ಮೃತಪಟ್ಟಿರುವ ಘಟನೆ ದಾಬಸ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೆಳೆಗೋಡು ಗ್ರಾಮದ ನಿವಾಸಿ ರಾಜೇಗೌಡ (57) ಮೃತಪಟ್ಟ ಕಾರ್ಮಿಕನಾಗಿದ್ದು, ಸೋಂಪುರ ಹೋಬಳಿಯ ಕೆಂಗಲ್ ಕೆಂಪೋಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ- 48 ರಸ್ತೆಯ ಪಕ್ಕದಲ್ಲೇ ಇರುವ ರಾಶಿ ಕಂಫರ್ಟ್ ಕೋಸ್ಟಲ್ ಡೈನ್ ಎಂಬ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಈ ಘಟನೆ ನಡೆದಿದ್ದು, ಜ.27ರಂದು ಬೆಳಗ್ಗೆ 11.30 ಗಂಟೆಯ ಸಮಯದಲ್ಲಿ ರಾಜೇಗೌಡ ಕೆಲಸ ಮಾಡುವಾಗ ರೆಸ್ಟೋರೆಂಟ್ ನಲ್ಲಿ ಜಾರಿ ಬಿದ್ದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರೆಸ್ಟೋರೆಂಟ್ ನಲ್ಲಿ ಕಾರ್ಮಿಕರಿಗೆ ಯಾವುದೇ ಮುಂಜಾಗ್ರತಾ ಕ್ರಮ ವಹಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ದಾಬಸ್‍ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.