)
ಕನ್ನಡಪ್ರಭ ವಾರ್ತೆ ಬೆಂಗಳೂರು
ವೃದ್ಧೆ ಮೇಲೆ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡು ಮೂಲದ ದೇವರಾಜ್(50) ಆತ್ಮಹತ್ಯೆ ಮಾಡಿಕೊಂಡವನು. ಆತ್ಮಹತ್ಯೆಗೂ ಮುನ್ನ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಭಾನುವಾರ ಮುಂಜಾನೆ 4.30ರ ಸುಮಾರಿಗೆ ಮಹಿಳೆಯ ಪತಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸಿಲ್ಕ್ ಬೋರ್ಡ್ ಸಮೀಪದ ಕೆಎಎಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮಂಗಳೂರು ಮೂಲದ ಮಹಿಳೆ, ಪತಿ ಮತ್ತು 27 ವರ್ಷದ ಪುತ್ರಿಯ ಜತೆ ಕೆಎಎಸ್ ಲೇಔಟ್‌ನಲ್ಲಿ ಸುಮಾರು 15 ವರ್ಷಗಳಿಂದ ನೆಲೆಸಿದ್ದರು. ಆಕೆಯ ಪತಿ ಮತ್ತು ಪುತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪತಿ ಕಾರ್ಯನಿಮಿತ್ತ ಆಗಾಗ್ಗೆ ವಿದೇಶಕ್ಕೆ ಹೋಗುತ್ತಿದ್ದರು.
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಂದ ಮೈಕೋ ಲೇಔಟ್ ಠಾಣೆ ಪೊಲೀಸರು, ಸೋಕೋ ತಂಡು ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಪ್ರಾಥಮಿಕವಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಪತ್ತೆಯಾಗಿದೆ. ಮತ್ತೊಂದೆಡೆ ಘಟನೆ ನಡೆದ ಸಮಯದಲ್ಲಿ ಮನೆಯ ಮೊದಲ ಮಹಡಿಯಲ್ಲಿ ಮಗಳು ಇದ್ದರೂ, ಕೆಳ ಮಹಡಿಯಲ್ಲಿ ನಡೆದ ಕೃತ್ಯದ ಬಗ್ಗೆ ಆಕೆಗೆ ಗೊತ್ತಾಗಿರಲಿಲ್ಲ ಎಂಬುದು ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇವರಾಜ್ ಸುಮಾರು 10 ವರ್ಷಗಳಿಂದ ಕೆಎಎಸ್ ಲೇಔಟ್‌ನಲ್ಲಿ ವಾಸವಾಗಿದ್ದ. ಕೊಲೆಯಾದ ಮಹಿಳೆ ಮನೆ ಸೇರಿ ಸಮೀಪದ ಹತ್ತಾರು ಮನೆಗಳಲ್ಲಿ ಕೆಲಸ ಮಾಡಿಕೊಂಡಿದ್ದ. ಕೆಲವೊಮ್ಮೆ ಆಯಾ ಮನೆಗಳಲ್ಲೇ ಮಲಗುತ್ತಿದ್ದ. ಅದೇ ರೀತಿ ಎರಡು ದಿನಗಳಿಂದ ದೇವರಾಜ್, ಮಹಿಳೆ ಮನೆಯಲ್ಲಿ ಮಲಗುತ್ತಿದ್ದ.
65 ವರ್ಷದ ಮಹಿಳೆಯನ್ನು ಕೆಲಸಗಾರನೇ ಹತ್ಯೆಗೈದಿದ್ದಾನೆ. ಘಟನಾ ಸ್ಥಳಕ್ಕೆ ಸೋಕೋ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.