ಕಾರ್ಮಿಕರು ದೇಶದ ಬೆನ್ನೆಲುಬು

KannadaprabhaNewsNetwork | Published : May 2, 2024 1:32 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ವಿಶ್ವ ಕಾರ್ಮಿಕರ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, ದೇಶದ ಕಾರ್ಮಿಕರಲ್ಲಿ ಸಂಘಟಿತ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಇದ್ದು, ಕೇಂದ್ರ ಸರ್ಕಾರ ಕಾರ್ಮಿಕರಿಗಾಗಿ ಯಾವ ಕೊಡುಗೆಯನ್ನೂ ನೀಡಿಲ್ಲ. ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದನೆಯನ್ನೂ ಮಾಡಿರುವುದಿಲ್ಲ. ಇದನ್ನು ಕಾರ್ಮಿಕರು ಅರ್ಥ ಮಾಡಿಕೊಳ್ಳಬೇಕು. ಕಾರ್ಮಿಕರು ನಮ್ಮ ದೇಶದ ಬೆನ್ನೆಲುಬು, ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಕಾರ್ಮಿಕರಿಗಾಗಿ ಯಾವುದೇ ಸೌಲಭ್ಯಗಳು ಇರಲಿಲ್ಲ.

ಕನ್ನಡಪ್ರಭ ವಾರ್ತೆ ವಿಜಯಪುರ

ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ವಿಶ್ವ ಕಾರ್ಮಿಕರ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, ದೇಶದ ಕಾರ್ಮಿಕರಲ್ಲಿ ಸಂಘಟಿತ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಇದ್ದು, ಕೇಂದ್ರ ಸರ್ಕಾರ ಕಾರ್ಮಿಕರಿಗಾಗಿ ಯಾವ ಕೊಡುಗೆಯನ್ನೂ ನೀಡಿಲ್ಲ. ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದನೆಯನ್ನೂ ಮಾಡಿರುವುದಿಲ್ಲ. ಇದನ್ನು ಕಾರ್ಮಿಕರು ಅರ್ಥ ಮಾಡಿಕೊಳ್ಳಬೇಕು. ಕಾರ್ಮಿಕರು ನಮ್ಮ ದೇಶದ ಬೆನ್ನೆಲುಬು, ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಕಾರ್ಮಿಕರಿಗಾಗಿ ಯಾವುದೇ ಸೌಲಭ್ಯಗಳು ಇರಲಿಲ್ಲ. ಅವರು ದಿನದಲ್ಲಿ 18 ಗಂಟೆಗಳ ಕಾಲ ಕೆಲಸ ಮಾಡಬೇಕಿತ್ತು. ಆದರೆ ಸ್ವಾತಂತ್ರ್ಯಾ ನಂತರ ಡಾ.ಬಾಬಾಸಾಹೇಬ ಅಂಬೇಡ್ಕರ್‌ ಅವರು ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದರು. ದಿನದಲ್ಲಿ 8ಗಂಟೆಗಳ ಕಾಲ ಕೆಲಸ ಮಾಡುವ ಕಾಯ್ದೆ ಜಾರಿಮಾಡಿದರು. ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿ ಅವರ ಜೀವನಸ್ಥಿತಿ ಸುಧಾರಿಸಲು ಕಾರಣರಾದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಮಿಕರಾದ ರಿಯಾಜ ಉಕ್ಕಲಿ, ಶೇಖರ ತೊರವಿ ಮತ್ತು ಮೊಹಸೀನ್ ಉಕ್ಕಲಿ ಇವರುಗಳನ್ನು ಸನ್ಮಾನಿಸಲಾಯಿತು. ರಾಜ್ಯ ಕಾರ್ಮಿಕ ಘಟಕದ ಉಪಾಧ್ಯಕ್ಷ ರಾಜಶೇಖರ ಯಡಹಳ್ಳಿ, ನ್ಯಾಯವಾದಿ ಕೆ.ಎಫ್. ಅಂಕಲಗಿ, ಸಾಹೇಬಗೌಡ ಬಿರಾದಾರ, ಪರ್ವೇಜ ಚಟ್ಟರಕಿ ಮುಂತಾದವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಅಬ್ದುಲ್‌ ಹಮೀದ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಸುಭಾಷ ಕಾಲೇಬಾಗ, ಅಪ್ಜಲ್ ಜಾನವೇಕರ, ವಿದ್ಯಾವತಿ ಅಂಕಲಗಿ, ಜಾಕೀರಹುಸೇನ ಮುಲ್ಲಾ, ಇಲಿಯಾಸ ಅಹ್ಮದ ಸಿದ್ದಿಕಿ, ವಸಂತ ಹೊನಮೊಡೆ, ಶಬ್ಬೀರ ಜಾಗೀರದಾರ, ಫಯಾಫ್ ಕಲಾದಗಿ, ತಾಜುದ್ದೀನ ಖಲೀಫಾ, ಶರಣಪ್ಪ ಯಕ್ಕುಂಡಿ, ಚನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಎಂ.ಎ. ಬಕ್ಷಿ, ಲಾಲಸಾಬ ಕೊರಬು, ಸತೀಶ ಅಡವಿ, ಅಕ್ಬರ್ ನಾಯಕ, ಅಯ್ಯೂಬಖಾನ ನದಾಫ್, ದೇವಾನಂದ ಲಚ್ಯಾಣ, ಅಲ್ಲಾಬಕ್ಷ ಖಲೀಫಾ, ಅಬ್ದುಲ್‌ಪೀರಾ ಜಮಖಂಡಿ, ಪರಶುರಾಮ ಹೊಸಮನಿ, ಮಹ್ಮದಅಯಾಜ ರೋಜಿವಾಲೆ, ಮಹ್ಮದ ಮುಲ್ಲಾ, ಕಲ್ಲಪ್ಪ ಪರಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.

Share this article