ಬಳ್ಳಾರಿ: ದೇಶದ ಶ್ರಮಿಕ ವರ್ಗವು ರಾಷ್ಟ್ರ ನಿರ್ಮಾಣದ ನಿಜವಾದ ಶಿಲ್ಪಿಗಳು. ಅವರ ಕಲ್ಯಾಣ, ಸಾಮಾಜಿಕ ಭದ್ರತೆ ಖಚಿತಪಡಿಸುವುದು ಸರ್ಕಾರದ ಆದ್ಯತೆ ಎಂದು ಕೇಂದ್ರ ಕಾರ್ಮಿಕ, ಉದ್ಯೋಗ ಹಾಗೂ ಯುವಜನ ವ್ಯವಹಾರಗಳ ಸಚಿವ ಡಾ.ಮನ್ಸುಖ್ ಮಾಂಡವೀಯ ಹೇಳಿದರು.
ಉಚಿತ ಆರೋಗ್ಯ ತಪಾಸಣೆ ಅಭಿಯಾನ:
ಹೊಸ ಕಾರ್ಮಿಕ ಸಂಹಿತೆಯ ಅಡಿಯಲ್ಲಿ 40 ವರ್ಷ ದಾಟಿದ ಕಾರ್ಮಿಕರಿಗಾಗಿ ಮೇ 7ರಿಂದ ದೇಶಾದ್ಯಂತ ಉಚಿತ ಆರೋಗ್ಯ ತಪಾಸಣೆ ಅಭಿಯಾನವನ್ನು ಪ್ರಾರಂಭಿಸಲಾಗುವುದು ಎಂದು ಸಚಿವರು ಘೋಷಿಸಿದರು.ಸಾಮಾಜಿಕ ಭದ್ರತೆಯ ವಿಸ್ತರಣೆ:
ಶಿಕ್ಷಣದಲ್ಲಿ ಮೀಸಲಾತಿ:
ದೊಡ್ಡಬಳ್ಳಾಪುರದ ಭಾಗದಲ್ಲಿ 1.5 ಲಕ್ಷಕ್ಕೂ ಹೆಚ್ಚು ನೋಂದಾಯಿತ ಕಾರ್ಮಿಕರಿದ್ದು, ಅವರ ಕುಟುಂಬದ ಸದಸ್ಯರನ್ನೂ ಸೇರಿ ಒಟ್ಟು 5.5 ಲಕ್ಷ ಜನರಿಗೆ ಈ ಹೊಸ ಆಸ್ಪತ್ರೆಯಿಂದ ಉಚಿತ ವೈದ್ಯಕೀಯ ಸೇವೆ ಲಭ್ಯವಾಗಲಿದೆ.
ಕೇಂದ್ರ ಕಾರ್ಮಿಕ ಮತ್ತು ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಈ ಆಸ್ಪತ್ರೆಯು ಒಪಿಡಿ, ಮಾಡ್ಯುಲರ್ ಆಪರೇಷನ್ ಥಿಯೇಟರ್, ತುರ್ತು ಚಿಕಿತ್ಸೆ, ಸ್ತ್ರೀರೋಗ, ಮಕ್ಕಳ ಆರೋಗ್ಯ ಸೇರಿದಂತೆ ಆಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಕಾರ್ಮಿಕರ ಜೀವನಮಟ್ಟ ಸುಧಾರಿಸಲು ಸಹಕಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಸದ ಡಾ.ಕೆ.ಸುಧಾಕರ್, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಸೇರಿದಂತೆ ಹಲವು ಗಣ್ಯರು ಹಾಗೂ ವರ್ಚುವಲ್ ಮೂಲಕ ಬಳ್ಳಾರಿಯ ಇಎಸ್ಐ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರದ ಇಎಸ್ಐ ಆಸ್ಪತ್ರೆಯನ್ನು ₹101.14 ಕೋಟಿ ವೆಚ್ಚದಲ್ಲಿ 5 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದೆ. ಸಾಮಾನ್ಯ ಔಷಧ ವಿಭಾಗ, ಶಸ್ತ್ರಚಿಕಿತ್ಸೆ, ಸ್ತ್ರೀರೋಗ ಮತ್ತು ಪ್ರಸೂತಿ, ಮಕ್ಕಳ ವಿಭಾಗ, ಮೂಳೆಚಿಕಿತ್ಸೆ, ತುರ್ತು ಚಿಕಿತ್ಸೆ, ರೇಡಿಯಾಲಜಿ ಮತ್ತು ಸುಸಜ್ಜಿತ ಪ್ರಯೋಗಾಲಯಗಳು ಒಳಗೊಂಡಿದೆ. ಆಸ್ಪತ್ರೆ ಆವರಣದಲ್ಲಿ ಸಿಬ್ಬಂದಿಗಾಗಿ 32 ವಸತಿಗೃಹಗಳನ್ನು ನಿರ್ಮಿಸಲಾಗಿದೆ.