ಲಕ್ಷ್ಮೇಶ್ವರ: ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರು, ಇತರೆ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸರ್ಕಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಕಾರ್ಮಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಹೇಳಿದರು. ಪಟ್ಟಣದ ಜ.ವೀರಗಂಗಾಧರ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ವೇಳೆ ಲಕ್ಷ್ಮೇಶ್ವರ ತಾಲೂಕು ಕಾರ್ಮಿಕ ಇಲಾಖೆಯ ಅಧಿಕಾರಿ ಉಮೇಶ ಹುಲ್ಲಣ್ಣವರ ಮಾತನಾಡಿ, ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸುವ ಮೂಲಕ ಅವರ ಆರೋಗ್ಯವು ಉತ್ತಮವಾಗಿರುವಂತೆ ನೋಡಿಕೊಳ್ಳುವ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡುತ್ತಿದೆ. ಆದ್ದರಿಂದ ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರು ಶಿಬಿರದ ಲಾಭ ಪಡೆದುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಕಾರ್ಯ ಮಾಡಬೇಕು ಎಂದು ಅವರು ಹೇಳಿದರು.
ಈ ವೇಳೆ ಮೌನೇಶ ಬಾಲೆಹೊಸೂರ, ದುರ್ಗಪ್ಪ ಬಿಂಜಡಗಿ, ಮನೋಹರ ಚಾವಡಿ, ಮಹ್ಮದ್ ಗೌಸ್ ಹುಲಗೂರ, ಯಲ್ಲಮ್ಮ ಹುಲಗೂರ ಇದ್ದರು.